Latestರಾಜಕೀಯ | Politicsರಾಷ್ಟ್ರೀಯ-National

ಮೂರನೇ ಬಾರಿಗೆ ಮೋದಿ ಪ್ರಧಾನಿ – ಜೂನ್‌ 8 ಸಂಜೆ ಪ್ರಮಾಣವಚನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi)‌ ಜೂನ್ 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು

https://youtu.be/Sx7PrNp35Is?si=dT2L62LZ19A118VR

ಇಂದು ಕೊನೆಯ ಕೇಂದ್ರ ಸಚಿವ ಸಂಪುಟ ಸಭೆಯನ್ನ ಪ್ರಧಾನಿ ಮೋದಿ ನಡೆಸಿದರು. ಇಂದಿಗೆ 17 ನೇ ಲೋಕಸಭೆ (17th Lok Sabha) ವಿಸರ್ಜನೆಗೆ ಶಿಫರಾಸು ಮಾಡಲಾಗಿದೆ. ಇದನ್ನೂ ಓದಿ: ಜೊತೆಗೆ ದೆಹಲಿಗೆ ಹಾರಿದ ನಿತೀಶ್​ ಕುಮಾರ್, ತೇಜಸ್ವಿ ಯಾದವ್

https://youtu.be/bJ8aWd95gqc?si=EQyCef4BQLqkj0NJ

ಜೂನ್‌ 7 ರ ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮರುದಿನ ಅಂದರೆ ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬಹುದು ಎಂಬುದಾಗಿ ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ದೆಹಲಿಯತ್ತ ಹೆಚ್.ಡಿ. ಕುಮಾರಸ್ವಾಮಿ

Share with Friends
author avatar
News Desk