BlogLatestTop Storiesವಿದೇಶ-International

ಪ್ರಧಾನಿ ಮೋದಿಗೆ ನೈಜೀರಿಯಾದ 2ನೇ ಅತ್ಯುನ್ನತ ನಾಗರಿಕ ಗೌರವ

ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ.ನೈಜೀರಿಯಾ ಸರ್ಕಾರವು ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರವನ್ನು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಿದೆ. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಆ ಮೂಲಕ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡುತ್ತಿರುವ 17ನೇ ಅಂತರರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. ಪ್ರಧಾನಿ ಮೋದಿ ಈ ಪ್ರಶಸ್ತಿ ಪಡೆದುಕೊಂಡು 2ನೇ ಗಣ್ಯರಾಗಿದ್ದಾರೆ. ಇದಕ್ಕೂ ಮುನ್ನ ರಾಣಿ ಎಲಿಜಬೆತ್ ಅವರು 1969ರಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಅವರು ಪ್ರಶಸ್ತಿ ಪ್ರದಾನ ಮಾಡಿದರು.ಮೂರು ದಿನಗಳ ಹಿಂದೆಯಷ್ಟೇ ಡೊಮಿನಿಕಾ ಸರ್ಕಾರವು ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾಗಿರುವ `ಡಾಮಿನಿಕಾ ಅವಾರ್ಡ್ ಆಫ್ ಹಾನರ್’ ಅನ್ನು ಘೋಷಿಸಿದೆ.

ಪ್ರಶಸ್ತಿ ಬಳಿಕ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನೈಜೀರಿಯಾ ‘ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ನಾನು ಅದನ್ನು ಅತ್ಯಂತ ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ಭಾರತ ಮತ್ತು ನೈಜೀರಿಯಾದ ಸ್ನೇಹ ಹಾಗೂ ಭಾರತದ 140 ಕೋಟಿ ಜನರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

17 ವರ್ಷಗಳ ಬಳಿಕ ಭೇಟಿ:
17 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ನೈಜೀರಿಯಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಹಾಗಾಗಿ ದ್ವಿಪಕ್ಷೀಯ ಸಂಬಂಧಗಳನ್ನು ವರ್ಧಿಸುವ ಕುರಿತು ಚರ್ಚೆ ಮಾಡಲಾಗಿದೆ. ನ.21ರವರೆಗೆ ಮೂರು ದೇಶಗಳಾದ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಕೈಗೊಂಡಿದ್ದಾರೆ.

ಬ್ರೆಜಿಲ್​ನಲ್ಲಿ ಮಂತ್ರ-ಘೋಷಗಳೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ನೈಜೀರಿಯಾ ಭೇಟಿಯನ್ನು ಪೂರ್ಣಗೊಳಿಸಿ ಇಂದು ಸೋಮವಾರ ಅವರು ಬ್ರೆಜಿಲ್ ತಲುಪಿದ್ದಾರೆ. ಇಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬ್ರೆಜಿಲ್ ತಲುಪಿದ ಬಳಿಕ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಮೋದಿಯನ್ನು ಸಂಸ್ಕೃತದ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು.

ಹೋಟೆಲ್​ನಲ್ಲಿ ದಾಂಡಿಯಾ ನೃತ್ಯ ಪ್ರದರ್ಶಿಸಲಾಯಿತು, ಸಂಪ್ರದಾಯಿಕ ಗುಜರಾತಿ ಉಡುಪು ಧರಿಸಿದ್ದ ನೃತ್ಯಗಾರರು ಅತ್ಯುತ್ಸಾಹದಿಂದ ಮೋದಿಯವರನ್ನು ಬರಮಾಡಿಕೊಮಡರು. ಈ ಸಂದರ್ಭಕ್ಕೆ ಆಧ್ಯಾತ್ಮದ ಸ್ಪರ್ಶ ನೀಡಿ ವೇದ ಮಂತ್ರಗಳನ್ನು ಪಠಿಸಿದರು, ಡಯಾಸ್ಪೊರಾ ಸ

Share with Friends
author avatar
News Desk