Latestಬೆಂಗಳೂರು-Bengaluru

ಮುಂಗಾರು ಚುರುಕು : ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರು,ಜು.23: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು,ಹವಾಮಾನ ಇಲಾಖೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

ಮುಂಗಾರು ಚುರುಕು ಭಾರೀ ಮಳೆ ಮುನ್ಸೂಚನೆ


ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೆ,ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

Share with Friends
author avatar
Digital Desk