ನ್ಯಾಯಲಕ್ಕೆ ಶರಣಾದ ಚಿತ್ರದುರ್ಗದ ಮುರುಘಾ ಶ್ರೀ
ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ಮುರುಘಾ (Muruga) ಮಠದ ಸ್ವಾಮೀಜಿ ಅವರ ಜಾಮೀನನ್ನು ಇತ್ತಿಚೆಗೆ ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಮೂಲಕ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆ ಚಿತ್ರದುರ್ಗದ 1 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಮುರುಘಾ ಶ್ರೀ(Murugha Sri) ಇಂದು ಶರಣಾಗಿದ್ದಾರೆ. ಮೇ 27 ಕ್ಕೆ ವಿಚಾರಣೆ ನಿಗದಿಗೊಳಿಸಿ ಕೋರ್ಟ್ ( Court) ಆದೇಶ ಹೊರಡಿಸಿದೆ.
ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್ (Supreme Court) ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿತ್ತು. ಜೊತೆಗೆ ವಿಶೇಷ ಕರ್ಟ್ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿತ್ತು. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದಾಗಿದೆ. ಇದನ್ನೂ ಓದಿ: ರಾಹುಲ್ ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ, ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ
2022ರ ಅಕ್ಟೋಬರ್ 13ರಂದು ಮುರುಘಾ ಸ್ವಾಮೀಜಿ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆ ಎರಡನೇ ಪೋಕ್ಸೋ ಕೇಸ್ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಎರಡೂ ಕೇಸ್ನಲ್ಲಿ ಚಿತ್ರದುರ್ಗ ಕೋರ್ಟ್ ಸ್ವಾಮೀಜಿಗೆ ಜಾಮೀನು ನಿರಾಕರಿಸಿತ್ತು. ಹೀಗಾಗಿ ಜಾಮೀನಿಗಾಗಿ ಮುರುಘಾ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು
ಹೈಕೋರ್ಟ್ನಿಂದ 1ನೇ ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗೆ ಬೇಲ್ ಸಿಕ್ಕಿತ್ತು. ನವೆಂಬರ್ 16 ರಂದು ಹೈಕೋರ್ಟ್ ಮುರುಘಾಶ್ರೀಗೆ 7 ಷರತ್ತುಗಳು ಹಾಕಿ ಜಾಮೀನು ನೀಡಿತ್ತು. ಬಂಧನವಾಗಿ ಬರೋಬ್ಬರಿ 441 ದಿನಗಳ ಬಳಿಕ ಮುರುಘಾ ಸ್ವಾಮೀಜಿ ರಿಲೀಸ್ ಆಗಿದ್ದರು. ಬಿಡುಗಡೆ ಬಳಿಕ ದಾವಣಗೆರೆಯ ವಿರಕ್ತ ಮಠದಲ್ಲಿ ಸ್ವಾಮೀಜಿ ವಾಸ್ತವ್ಯ ಹೂಡಿದ್ದರು. ಇದನ್ನೂ ಓದಿ: ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ
