
ಕಾವೇರಿ ವಿಚಾರದ ಕರ್ನಾಟಕ ಬಂದ್‌ಗೆ “ನೋ ರೆಸ್ಪಾನ್ಸ್” – ಎಂದಿನಂತೆ ಜನಜೀವನ

ಕಲಬುರಗಿ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕಲಬುರಗಿಯಲ್ಲಿ ಯಾವುದೇ ಬೆಂಬಲ ಸಿಗಲಿಲ್ಲ.
ಬಂದ್‌ನಿಂದಾಗಿ ಕಲಬುರಗಿ ಜಿಲ್ಲೆಯಲ್ಲಿ ಜನಜೀವನ ಎಂದಿನಂತೆ ಸಾಗಿತು. ಸಾರಿಗೆ ಬಸ್, ವಾಹನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ. ಕೆಎಸ್ಆರ್‌ಟಿಸಿ ಬಸ್‌ಗಳು, ಆಟೋ, ಟ್ಯಾಕ್ಸಿಗಳು ಎಂದಿನಂತೆ ಸಂಚರಿಸಿದವು.
ಹೋಟೆಲ್, ಅಂಗಡಿ ಮುಂಗಟ್ಟುಗಳು ಸಹ ಓಪನ್ ಇದ್ದು, ಮಾರುಕಟ್ಟೆಗಳಲ್ಲಿ ವಹಿವಾಟು ನಡೆಯಿತು. ಬಂದ್‌ಗೆ ಬೆಂಬಲಿಸಿ ಯಾವುದೇ ಕನ್ನಡ ಪರ ಸಂಘಟನೆಗಳು ಬೀದಿಗಿಳಿಯಲಿಲ್ಲ. ಹೋರಾಟಗಾರರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿಲ್ಲ.
ಬಂದ್‌ಗೆ ಬೆಂಬಲ ನೀಡದ ಕಾರಣ ಕಲಬುರಗಿಯಲ್ಲಿ ಬಂದ್‌ನ ಯಾವುದೇ ಪರಿಣಾಮ ಕಂಡುಬರಲಿಲ್ಲ. ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅಷ್ಟಾಗಿ ಆಕ್ರೋಶ ಕಂಡುಬರದಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
