Latestಜಿಲ್ಲಾ ಸುದ್ದಿಗಳು | District Newsಮಂಡ್ಯ-Mandya

ತಮಿಳುನಾಡಿಗೆ ನೀರು ಬಿಡುವ ಆದೇಶದ ಬೆನ್ನಲ್ಲೇ ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ.

ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ಭಿಕ್ಷಾಟನೆ ನಡೆಸಿ ಪ್ರತಿಭಟನೆ ಮಾಡಲಾಯಿತು. ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಸರ್ಕಾರ ಹಾಗೂ CWRC ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಮೈಸೂರು–ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಪ್ರತಿಭಟನಾಕಾರರು ಉರುಳುಸೇವೆ ನಡೆಸಿ, ಭಿಕ್ಷಾಟನೆ ತಟ್ಟೆ ಹಿಡಿದು “ಕಾವೇರಿ ನೀರು ತಮಿಳುನಾಡಿಗೆ ಹರಿಸಬೇಡಿ” ಎಂದು ಘೋಷಣೆಗಳನ್ನು ಕೂಗಿದರು.

ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ಒಂದು ವೇಳೆ ಸರ್ಕಾರ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು ಹರಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಮಂಡ್ಯ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

Share with Friends
author avatar
News Desk