ರಾಜ್ಯ-Karnatakaರಾಷ್ಟ್ರೀಯ-National

ಭಾರತದ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

ಬೆಂಗಳೂರು, ಜು. 7: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸೋಮವಾರ ಬೆಳಿಗ್ಗೆ ನಿಧನರಾದರು.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

imaBridgeManofIndiaGirishge

ಡಾ. ಗಿರೀಶ್ ಭಾರದ್ವಾಜ್ ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ರಾಜ್ಯದ ಜನತೆ, ತಾಂತ್ರಿಕ ವಲಯದ ತಜ್ಞರು ಮತ್ತು ಸಾವಿರಾರು ಗ್ರಾಮೀಣ ಕುಟುಂಬಗಳು ಸಂತಾಪ ಸೂಚಿಸಿವೆ.

1950ರ ಮೇ 2ರಂದು ಸುಳ್ಯದಲ್ಲಿ ಜನಿಸಿದ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಬಳಿಕ ಗ್ರಾಮೀಣ ಪ್ರದೇಶಗಳ ಸಂಪರ್ಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸಕ್ಕೆ ತಮ್ಮ ಜೀವನವನ್ನು ಸಮರ್ಪಿಸಿಕೊಂಡರು.

1989ರಲ್ಲಿ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಕಡಿಮೆ ವೆಚ್ಚದ ತೂಗು ಸೇತುವೆ ನಿರ್ಮಿಸುವ ಮೂಲಕ ತಮ್ಮ ಸೇವಾ ಕಾರ್ಯ ಆರಂಭಿಸಿದರು. ನಂತರ ಕರ್ನಾಟಕ ಸೇರಿದಂತೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ

Share with Friends
author avatar
Digital Desk