BlogLatestTop Storiesಬೆಳಗಾವಿ-Belagaviರಾಜ್ಯ-Karnataka

ಹಿಂಸಾರೂಪ ತಾಳಿದ ಪಂಚಮಸಾಲಿ ಮೀಸಲಾತಿ ಹೋರಾಟ, ಪೊಲೀಸರಿಂದ ಲಾಠಿ ಚಾರ್ಜ್‌

ಬೆಳಗಾವಿ : ಚಳಿಗಾಲ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲಿ 2A ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯವು ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಇಂದು ಅಪಾರ ಸಂಖ್ಯೆಯಲ್ಲಿ ಪ್ರತಿಭಟನೆಗೆ ಜನ ಸೇರಿದ ಕಾರಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್‌ ಮಾಡಿದ್ದಾರೆ.

ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು.

ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದ್ದು, ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬಸವ ಜಯ ಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಟ್ರ್ಯಾಕ್ಟರ್ ರ್ಯಾಲಿಯ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪಂಚಮಸಾಲಿ ಸಮಾಜದವರ ನಡುವೆ ತಳ್ಳಾಟ ನೂಕಾಟ ನಡೆದಿದೆ.

ಆಕ್ರೋಶಗೊಂಡ ಪ್ರತಿಭಟನಾಕಾರರು ಸರ್ಕಾರಿ ವಾಹನಗಳು, ಶಾಸಕರು ಮತ್ತು ಎಂಎಲ್‌ಸಿಗಳಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಕಲ್ಲು ತೂರಾಟದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರಿಗೆ ಗಾಯ‌ಗಳಾಗಿದ್ದರೆ, ಐವತ್ತಕ್ಕೂ ಅಧಿಕ ಹೋರಾಟಗಾರರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಆರ್ ಹಿತೇಂದ್ರ ಅವರು ಲಾಠಿ ಚಾರ್ಜ್‌ಗೆ ಆದೇಶಿಸಿದ್ದಾರೆ. ಲಾಠಿ ಚಾರ್ಜ್ ನಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ವಾಮೀಜಿ, ಮುಖಂಡರು ಪೊಲೀಸರ ವಶಕ್ಕೆ :
ರಾಷ್ಟ್ರೀಯ ಹೆದ್ದಾರಿಯ ಮೇಲೆ ಧರಣಿ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌, ಈರಣ್ಣ, ಅರವಿಂದ ಬೆಲ್ಲದ್‌ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಇದರೊಂದಿಗೆ ಸಮಾಜದ ವಕೀಲರು, ರಾಜಕಾರಣಿಗಳು, ಕಾರ್ಯಕರ್ತರು, ಇತರರನ್ನು ಚದುರಿಸುವ ಕೆಲಸ ಪೊಲೀಸರು ಮಾಡಿದರು.

Share with Friends
author avatar
News Desk