LatestTop Storiesಬೆಂಗಳೂರು-Bengaluruರಾಜ್ಯ-Karnataka

ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ 12 ಗಂಟೆ ವಿಮಾನದಲ್ಲೇ ಪ್ರಯಾಣಿಕರು ಲಾಕ್‌

ಬೆಂಗಳೂರು: ಸ್ಪೈಸ್ ಜೆಟ್ ಏರ್‌ಲೈನ್ಸ್ (Spicejet‌ Airlines) ಸಿಬ್ಬಂದಿಯ ಎಡವಟ್ಟಿನಿಂದಾಗಿ ಟೇಕಾಫ್ ಆಗದ ಕಾರಣ ಸುಮಾರು 12 ಗಂಟೆಗಳ ಕಾಲ ವಿಮಾನದಲ್ಲೇ ಪ್ರಯಾಣಿಕರು ಲಾಕ್ ಆದ ಪ್ರಸಂಗ ನಡೆದಿದೆ.

ಸುಮಾರು 100 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ವಿಮಾನದಲ್ಲೇ ಲಾಕ್‌ ಆಗಿದ್ದಾರೆ. ಹಾಗಾಹಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಹೈಜಾಕ್ ಮಾಡಿ ಕೂರಿಸಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಯ್ತು ರೌಡಿಶೀಟರ್ ಗಳ ಫ್ಯಾನ್ ಪೇಜ್ ಗಳು

https://youtu.be/VNniaOrSpzQ?si=B7B26Ce8bWhh8e53

ಶುಕ್ರವಾರ ಸಂಜೆ 7 ಗಂಟೆಯಿಂದ ಪ್ರಯಾಣಿಕರು ಫ್ಲೈಟ್‍ನಲ್ಲೆ ಕುಳಿತಿದ್ದರು. ವಿಮಾನದಲ್ಲಿ ಊಟ, ನಿದ್ದೆ ಇಲ್ಲದೇ ಪ್ರಯಾಣಿಕರ ಪರದಾಟ ಅನುಭವಿಸಿದರು.

SG8151 ಸ್ಪೈಸ್ ಜೆಟ್ ದೆಹಲಿಯಿಂದ ಬೆಂಗಳೂರಿಗೆ ಬರಬೇಕಿತ್ತು. ಟರ್ಮಿನಲ್ 3 ರಿಂದ ರಾತ್ರಿ 7.40 ಕ್ಕೆ ಟೆಕಾಫ್ ಅಗಬೇಕಿತ್ತು. ಆದರೆ ವಿಮಾನ ಟೆಕಾಫ್ ಆಗದೇ ರನ್ ವೇ ನಲ್ಲೇ ನಿಲ್ಲಿಸಿಕೊಳ್ಳಲಾಗಿತ್ತು. ಇದಕ್ಕೆ ಸ್ಪೈಸ್ ಜೆಟ್ ಕಾರಣ ಕೂಡ ಕೊಡದೇ ಇರುವುದರಿಂದ ಪ್ರಯಾಣಿಕರು ವಿಮಾನದೊಳಗೆ ಕುಳಿತು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..

https://youtu.be/H321Hvd7Xug?si=hITprQ0ENnsCobg8

ಕೊನೆಗೂ ಇದೀಗ ವಿಮಾನ ಟೇಕಾಫ್‌ ಆಗಿದ್ದು, ಇಂದು 9:10ಕ್ಕೆ ವಿಮಾನ ಬೆಂಗಳೂರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ತಾಂತ್ರಿಕ ದೋಷದಿಂದ ವಿಮಾನ ನಿಂತಿರುವುದಾಗಿ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ​ ಮುಂದೂಡಿಕೆ

Share with Friends
author avatar
News Desk