Crime NewsLatestರಾಜಕೀಯ | Politicsರಾಜ್ಯ-Karnatakaಹಾಸನ-Hassan

ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ (Likith Gowda) ಹಾಗೂ ಚೇತನ್ (Chetan) ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ (Court) ವಜಾಗೊಳಿಸಿದೆ.

ಮೇ 12ರಂದು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಲಿಖಿತ್ ಹಾಗೂ ಚೇತನ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ. ಇದನ್ನೂ ಓದಿ:ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

https://youtu.be/lwT9p6w4n0U?si=gK2Cg3pU5bUqev4o

ಸೋಮವಾರ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಚಿನ್ನದನಾಡಲ್ಲಿ ಸಾಲ ತೀರಿಸಲು ಗಂಡು ಮಗುವನ್ನ ಮಾರಿದ ತಂದೆ

Share with Friends
author avatar
News Desk