LatestTop Storiesಜಿಲ್ಲಾ ಸುದ್ದಿಗಳು | District Newsವಿಜಯಪುರ-Vijayapura

ಆಧಾರ್ ಕಾರ್ಡ್ ತಿದ್ದುಪಡಿಗಾಗಿ ಜನರ ಪರದಾಟ..!

ವಿಜಯನಗರ ಸೆ.24- ಆಧಾರ್ ಕಾರ್ಡ್ನಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಆಗಮಿಸುತ್ತಿರುವ ಸಾರ್ವಜನಿಕರು ನಿತ್ಯವೂ ಕಚೇರಿಗೆ ಬಂದು ವಾಪಸ್ ತೆರಳುವಂತಾಗಿದ್ದು, ವಿಜಯನಗರ ಜಿಲ್ಲೆಯ ಕಾನಾಹೊಸಹಳ್ಳಿ ನಾಡ ಕಚೇರಿಯಲ್ಲಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಾನಾಹೊಸಹಳ್ಳಿ ನಾಡ ಕಚೇರಿಯಲ್ಲಿ ಆಧಾರ್ ತಿದ್ದುಪಡಿ ಸೇವೆ ಹಲವು ದಿನಗಳಿಂದ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ,ಇದರಿಂದ ದೂರದ ಊರುಗಳಿಂದ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಆಧಾರ್ ತಿದ್ದುಪಡಿಗಾಗಿ ಪ್ರತಿದಿನ ಕಚೇರಿಗೆ ಆಗಮಿಸುತ್ತಿರುವ ಜನರಿಗೆ ಸೇವೆ ದೊರೆಯದೆ ನಿರಾಸೆಯಿಂದ ವಾಪಸ್ ತೆರಳುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು, ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಯಾಗಿ ಕಚೇರಿ ಸಿಬ್ಬಂದಿ ತಾಂತ್ರಿಕ ದೋಷ ಎಂದು ತಿಳಿಸುವ ಪೋಸ್ಟರ್ ಅನ್ನು ಕಚೇರಿಯಲ್ಲಿ ಅಂಟಿಸಿದ್ದಾರೆ. ಆದರೆ ಸಮಸ್ಯೆ ಯಾವಾಗ ಬಗೆಹರಿಯಲಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಆಧಾರ್ ತಿದ್ದುಪಡಿ ಸೇರಿದಂತೆ ಅಗತ್ಯ ಸೇವೆಗಳಿಗಾಗಿ ಬರುವ ಸಾರ್ವಜನಿಕರ ಸಮಯ ಹಾಗೂ ಹಣ ವ್ಯರ್ಥವಾಗದಂತೆ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿ ಸೇವೆಯನ್ನು ಪುನರಾರಂಭಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share with Friends
author avatar
Digital Desk