Crime NewsLatestTop Storiesಬೆಂಗಳೂರು-Bengaluruರಾಜ್ಯ-Karnataka

ಪೊಲೀಸರೇ ಡೀಲ್‌ ನಲ್ಲಿ ಭಾಗಿಯಾದ್ರೆ ಹುಷಾರ್..!!

ಬೆಂಗಳೂರು, ಜು.11: ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ ಎಂದು ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ 75 ಬೊಲೆರೋ ವಾಹನಗಳ ಲೋಕಾರ್ಪಣೆ

ವಿಧಾನಸೌಧದ ಆವರಣದಲ್ಲಿ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.
ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಇಡೀ ದೇಶ ಕರ್ನಾಟಕವನ್ನು ಗಮನಿಸುತ್ತಿದೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದರು.
ಕೇರಳ ಗೃಹಸಚಿವ ರಮೇಶ್ ಚೆನ್ನಿತ್ತಾಲ ರ್ನಾಟಕ ಗಡಿ ದಾಟಿ ಯಾವುದೇ ಮಾದಕ ವಸ್ತು ಕೇರಳ ಗಡಿ ಮೂಲಕ ಹೋಗಬಾರದೆಂದು ಮನವಿ ಮಾಡಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಮಾದಕ ವಸ್ತು ಬರದಂತೆ ತಡೆಯಲಾಗುವುದು ಎಂದು ಅವರಿಗೆ ಆಶ್ವಾಸನೆ ನೀಡಿದ್ದೇನೆ ಎಂದು ಡಿಕೆಶಿ ತಿಳಿಸಿದರು.
ಪ್ರಿಯಾಂಕ್ ಖರ್ಗೆ ಅವರು ಈ ಇಲಾಖೆ ಬಗ್ಗೆ ಬಹಳ ಆಸಕ್ತಿ ಹೊಂದಿದ್ದರು. ಕಳೆದ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣವನ್ನು ತಮ್ಮದೇ ಆದ ರೀತಿ ತನಿಖೆ ಮಾಡಿ ಸರ್ಕಾರ ಹಾಗೂ ಜನರ ಗಮನ ಸೆಳೆದಿದ್ದರು.ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು, ಯಾರೊಬ್ಬರೂ ಲಂಚ ಕೊಟ್ಟು ಕೆಲಸಕ್ಕೆ ಸೇರಬಾರದು. ಅರ್ಹತೆಯೇ ಹುದ್ದೆಯ ನೇಮಕಾತಿಗೆ ಮುಖ್ಯ ಮಾನದಂಡ ಎಂಬ ಅಡಿಪಾಯ ಹಾಕಿದ್ದಾರೆ. ಸರ್ಕಾರ ನಿಮ್ಮ ಜೊತೆ ಇರುತ್ತದೆ. ನೀವು ನಿಮ್ಮ ಕರ್ತವ್ಯನ್ನು ಸರಿಯಾಗಿ ನಿಭಾಯಿಸಿ ಎಂದು ಕಿವಿಮಾತು ಹೇಳಿದರು.

Share with Friends
author avatar
Digital Desk