Blogರಾಜಕೀಯ | Politicsರಾಜ್ಯ-Karnataka

ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದರೆ, ಇತ್ತ ರಾಜ್ಯ ಸರ್ಕಾರ ಡೊಂಬರಾಟವಾಡುತ್ತಿದೆ : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯಿಂದಾಗಿ ಅಸ್ತವ್ಯಸ್ತತೆ ಉಂಟಾಗಿದ್ದು, ಜನರ ಮೇಲೆ ಯಾವುದೇ ಕಾಳಜಿ ಇಲ್ಲದ ರಾಜ್ಯ ಸರ್ಕಾರ ರಾಜಕೀಯ ಡೊಂಬರಾಟದಲ್ಲಿ ಮುಳಗಿ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾತ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ‌ ಜನರು ಕಾಂಗ್ರೆಸ್ ಕಲ್ಯಾಣಕ್ಕಾಗಿ 136 ಸೀಟ್ ಕೊಟ್ಟು ಅಧಿಕಾರಕ್ಕೆ ತಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಯಾವ ರೀತಿಯಾಗಿ ವರ್ತನೆ ಮಾಡುತ್ತಿದೆ ಎಂಬುದನ್ನು ಸ್ವತಃ ಕಾಂಗ್ರೆಸ್ ನವರೇ ಆತ್ಮವಲೋಕನ ಮಾಡಿಕೊಳ್ಳಬೇಕು ಎಂದರು.

ಸಿಎಂ ಸಿದ್ದರಾಮಯ್ಯ ಅವರೇ ನೀವು ಏಕೆ ರಾಜಭವನ ಚಲೋ ಮಾಡಿತ್ತೀರಿ, ಮುಡಾ ಚಲೋ ಮಾಡ್ರಿ, ಅಲ್ಲಿ ಹೋಗಿ ಕೈಮುಗಿದು ನಂದು ತಪ್ಪಾಗಿದೆ ಎಂದು ಹೇಳಿ, ರಾಜಭವನ ಚಲೋ ಅಕ್ಷಮ್ಯ ಅಪರಾಧ, ರಾಜಪಾಲರು ತನಿಖೆಗೆ ಸೂಚನೆ ಕೊಟ್ಡಿದ್ದಕ್ಕೆ ಇವರೇಕೆ ಹೆದರುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದರು.

ರಾಜೀನಾಮೆ ಕೋಡೋದು ಬಿಡೋದು ಕಾಂಗ್ರೆಸ್ ಸರ್ಕಾರಕ್ಕೆ ಬಿಟ್ಟಿದ್ದು, ನಿಮಗೂ ಕೇಜ್ರಿವಾಲ್ ಅವರಿಗೂ ನಾಚಿಕೆಯಿಲ್ಲ ಎಂದರೆ ರಾಜೀನಾಮೆ ಕೊಡಲು ಹೋಗಬೇಡಿ, ಸಿಎಂ ಸೇರಿದಂತೆ ಅವರ ಕುರ್ಚಿ ಉಳಿಸಲು ಮುಳಗಿದೆ ಹೊರತು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

Share with Friends
author avatar
News Desk