Crime NewsLatestರಾಜ್ಯ-Karnataka

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳ ಬಳಿಕ NIA ಬಲೆಗೆ ಬಿದ್ದ ಪ್ರಮುಖ ಆರೋಪಿ

ನವದೆಹಲಿ: ಕರ್ನಾಟಕ ಬಿಜೆಪಿ (BJP) ಯುವ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ನಂತರ ಪ್ರಮುಖ ಆರೋಪಿಯನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.

ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಎನ್‌ಐಎ ತಂಡ ಇಂದು ಬೆಳಗ್ಗೆ ಸಕಲೇಶಪುರದಲ್ಲಿ (Sakaleshpur) ಆರೋಪಿಯನ್ನು ಬಂಧಿಸಿದ್ದಾರೆ.

https://youtu.be/PsNwh7YFS5Y?si=1cP1iivPZ1hKK32g

ಪ್ರಕರಣವೇನು?
ಬಿಜೆಪಿ ಯುವ ಮೋರ್ಚಾ ಸದಸ್ಯರಾದ ಪ್ರವೀಣ್‌ಕುಮಾರ್ ಅವರು ದಕ್ಷಿಣ ಕನ್ನಡ ಜೆಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಬಳಿ ಅಕ್ಷಯ್ ಕೋಳಿ ಮಾಂಸದ ಆಂಡಿಯನ್ನ ಹೊಂದಿದ್ದರು. ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕ್‌ನಲ್ಲಿ ಮೂವರು ಬಂದು ತಲ್ವಾರ್‌ನಿಂದ ಹಲ್ಲೆ ನಡೆಸಿದ್ದರು. ಇದನ್ನೂ ಓದಿ:ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ

https://youtu.be/XMh0gUEtwQ4?si=Ki5ep3WHbKUZMg7O

ಹಲ್ಲೆ ನಡೆದ ತಕ್ಷನವೇ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿಲಾಯಿತ್ತು. ಆದರೆ ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಾವಾದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆ ಮಾಡಲಾಯಿತ್ತು. ಇದನ್ನೂ ಓದಿ: ಬೆಲ್ಜಿಯಂನಲ್ಲಿ 14 ವರ್ಷದ ಬಾಲಕಿ ಮೇಲೆ 10 ಮಂದಿಯಿಂದ ಸಾಮೂಹಿಕ ಅತ್ಯಾಚಾರ

https://youtu.be/NDNmrmJgMPo?si=Cfx-gEmmPDTqBtZb

ಈ ಕೇಸ್ ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಎನ್‌ಐಎಗೆ ಪ್ರಕರಣವನ್ನು ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ 20 ಜನರ ವಿರುದ್ಧ ಆರೋಪಪಟ್ಟಿಯನ್ನ ಎನ್‌ಐಎ ಸಲ್ಲಿಸಿತ್ತು. ಎನ್‌ಐಎ ಚಾರ್ಜ್ ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿತ್ತು. ಇದನ್ನೂ ಓದಿ: ಜಿಂದಲ್ ಕಾರ್ಖೆನೆಯಲ್ಲಿ ಅಪಘಾತ- ನೀರಿಗೆ ಬಿದ್ದು 3 ಸಾವು

https://youtu.be/tt86zgUAArE?si=lNfaZKJ5eZrAFMqy
Share with Friends
author avatar
News Desk