
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭರದ ಸಿದ್ಧತೆ
ಬೆಂಗಳೂರು: 80ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ತಾಲೀಮು ನಡೆಯಿತು.ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಾಲೀಮನ್ನು ವೀಕ್ಷಿಸಿದರು.ಬಳಿಕ ಮಾತನಾಡಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಸ್ವಾತಂತ್ರ‍್ಯೋತ್ಸವದAದು ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಳೆದ 15 ದಿನಗಳಿಂದಲೇ ಮೈದಾನದಲ್ಲಿ ಪೊಲೀಸರನ್ನು ಕಣ್ಣಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಬೆಂಗಳೂರು ನಗರದ ಎಲ್ಲ ಹೋಟೆಲ್‌ಗಳು, ಲಾಡ್ಜ್ಗಳು, ತಂಗುದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡುವವರ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ. ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ .ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮ ವೀಕ್ಷಣೆಗೆ ಈಗಾಗಲೇ 1,000 ಪಾಸ್‌ಗಳನ್ನು ಆನ್‌ಲೈನ್ ಮೂಲಕ ವಿತರಿಸಲಾಗಿದೆ ಎಂದು ಮಹೇಶ್ವರ ರಾವ್ ಹೇಳಿದರು.
ಮುಖ್ಯಮಂತ್ರಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಮೈದಾನದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರು ಬೆಳಗ್ಗೆ 8.15ರೊಳಗೆ ಮೈದಾನ ಪ್ರವೇಶಿಸಿ ಹಾಜರಿರಬೇಕು.ಕಾರ್ಯಕ್ರಮದ ಸಂದರ್ಭದಲ್ಲಿ ಸಂಚಾರ ಮಾರ್ಗಗಳಲ್ಲೂ ಬದಲಾವಣೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗ್ಗೆ 8.55ಕ್ಕೆ ಮೈದಾನಕ್ಕೆ ಆಗಮಿಸಲಿದ್ದಾರೆ.ಅವರ ಆಗಮನದ ಹಿನ್ನೆಲೆಯಲ್ಲಿ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮೈದಾನದ ಭದ್ರತೆಗೆ ಇಬ್ಬರು ಜಂಟಿ ಪೊಲೀಸ್ ಆಯುಕ್ತರು, 9 ಡಿಸಿಪಿಗಳು, 17 ಎಸಿಪಿಗಳು, 49 ಇನ್‌ಸ್ಪೆಕ್ಟರ್‌ಗಳು, 106 ಪಿಎಸ್‌ಐಗಳು ಸೇರಿದಂತೆ 1,100 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಚಾರ ನಿರ್ವಹಣೆಗೆ ಮೂವರು ಡಿಸಿಪಿಗಳು ಸೇರಿದಂತೆ ಒಟ್ಟು 1,583 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಭದ್ರತಾ ದೃಷ್ಟಿಯಿಂದ ಮೈದಾನದ ಸುತ್ತಮುತ್ತ 110 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.7 ಕೆಎಸ್‌ಆರ್‌ಪಿ ಹಾಗೂ ಸಿಎಆರ್ ತುಕಡಿಗಳು, ಅಗ್ನಿಶಾಮಕ ದಳ, ಮೂರು ಆಂಬ್ಯುಲೆನ್ಸ್ ಗಳು , ಒಂದು ಕ್ಯೂಆರ್‌ಟಿ ತಂಡ ಹಾಗೂ ಡಿ-ಸ್ವಾಟ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ಸಿಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
