Latestರಾಷ್ಟ್ರೀಯ-National

ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಸಭೆಯಲ್ಲಿ (Loka Sabha) ಮಾತನಾಡಲಿದ್ದಾರೆ.

ಮೋದಿ ತಮ್ಮ ಭಾಷಣದಲ್ಲಿ ಅಗ್ನಿವೀರ್‌, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸುವ ಜೊತೆ ಜೊತೆಗೆ ವಿರೋಧ ಪಕ್ಷಗಳ ನಾಯಕರ ಟೀಕೆಗೆ ಅವರು ಉತ್ತರ ನೀಡಲಿದ್ದಾರೆ. ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು

https://youtu.be/N8c96Add8Vs?si=gkXjaFtOX3PlRLfN

ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ ಗುರಿಯಾಗಿಸಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾಷಣ ಮಾಡಿದ್ದರು. ಜೊತೆಗೆ ಹಿಂದೂ ಹೇಳಿಕೊಳ್ಳುವವರಿಂದ ಹಿಂಸಾಚಾರ ಎಂದು ಹೇಳಿದರು. ಇದೀಗ ಅವರು ಹೇಳಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಮೋದಿ ಅವರು ಎದ್ದು ನಿಂತು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಮೋದಿ ಅವರು ಈ ಎಲ್ಲಾ ವಿಚಾರಗಳನ್ನು ಪ್ರಸ್ತಾಪ ಮಾಡಿ ಇಂದು ತಿರುಗೇಟು ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ:ಬಾವಿಯಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಶವ ಪತ್ತೆ – ಆತ್ಮಹತ್ಯೆ ಶಂಕೆ

https://youtu.be/VPXvU7WvTKQ?si=0Vd8llek40mHpR3F

ಸದನದಲ್ಲಿ ಮಾತನಾಡುವ ಮೊದಲು ಇಂದು ಬೆಳಗ್ಗೆ 9:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಎನ್‌ಡಿಎ ಸಂಸದೀಯ ಪಕ್ಷದ ಸಭೆ ಕರೆದಿದ್ದು ಸಭೆ ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಅಧಿಕಾರ ವಹಿಸಿಕೊಂಡ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷದ ಸಂಸದರನ್ನು ಉದ್ದೇಶಿಸಿ ಮೊದಲ ಬಾರಿಗೆ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲಾ ಸಂಸತ್ ಸದಸ್ಯರಿಗೆ ಕಡ್ಡಾಯವಾಗಿ ಹಾಜಾರಾಗುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ

Share with Friends
author avatar
News Desk