Blogರಾಜ್ಯ-Karnataka

ಟೈರ್ ಸ್ಫೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್‌

ಚಿತ್ರದುರ್ಗ : ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಗೇಟ್ ಬಳಿ ನಡೆದಿದೆ. ಇಂದು ಬೆಳಗಿನ ಜಾವ 4:30ರ ಸುಮಾರಿಗೆ ಸಂಭವಿಸಿರುವ ಅವಘಡ. ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

https://youtu.be/tA8j79joLXo?si=kSRv7p0BssGmBlVN

ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್. ಬಸ್ಸಿನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಗುಯಿಲಾಳು ಟೋಲ್ ಬಳಿ ಬಸ್ ಬರುತ್ತಿದ್ದಂತೆ ಟೈರ್‌ ಬಳಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ ಬಳಿಕ ಏಕಾಏಕಿ ಟೈರ್ ಸ್ಫೋಟಿಸಿ ಬಸ್ ಹೊತ್ತಿ ಉರಿದಿದೆ.

ಲೈನರ್ ಸ್ಪರ್ಶಿಸಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ. ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share with Friends
author avatar
News Desk