Crime NewsLatestಯಾದಗಿರಿರಾಜ್ಯ-Karnataka

ಖಾಸಗಿ ಬಸ್ ಪಲ್ಟಿ – 7 ಮಂದಿ ಗಂಭೀರ, ಸ್ಥಳದಲ್ಲೇ ಇಬ್ಬರು ಸಾವು

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ.

37 ಜನ ಪ್ರಯಾಣಿಕರಿದ್ದ ಈ ಬಸ್‌ ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತಿತ್ತು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.

https://youtu.be/yT8_wXTi9wQ?si=vC_ikdaEf0xktSej

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

https://youtu.be/R9n1ZgRHKUA?si=ubjwn7roBzNaeMFd

ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ – ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯ ಎಚ್ಚರಿಕೆ

Share with Friends
author avatar
News Desk