LatestTop Storiesಜಿಲ್ಲಾ ಸುದ್ದಿಗಳು | District Newsಬೆಳಗಾವಿ-Belagavi

ಬೆಳಗಾವಿ ಚೆನ್ನಮ ವೃತ್ತದಲ್ಲಿ ಪ್ರತಿಭಟನೆ…

ಬೆಳಗಾವಿ: ಬರ ಹಾಗೂ ಅತಿವೃಷ್ಟಿಯಿಂದ ರೈತರು ನಿರಂತರವಾಗಿ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ, ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಮುಖ ಹಕ್ಕೊತ್ತಾಯಗಳನ್ನು ಜಾರಿಗೊಳಿಸಬೇಕು ಎಂದು ರೈತ ಮುಖಂಡ ಹಾಗೂ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಇನ್ನೂ ಬರಗಾಲ ಘೋಷಣೆಯಾಗದಿರುವ ಎಲ್ಲಾ ತಾಲೂಕುಗಳನ್ನು ತಕ್ಷಣ ಸಂಪೂರ್ಣ ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಬೇಕು.

ಬರದಿಂದ ಕಂಗೆಟ್ಟಿರುವ ರೈತರಿಗೆ ಸರ್ಕಾರ ತಕ್ಷಣವೇ ಕನಿಷ್ಠ 50 ಸಾವಿರ ರೂಪಾಯಿ ಬರ ಪರಿಹಾರವನ್ನು ರೈತರ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಕಳೆದ ಐದು ವರ್ಷಗಳಿಂದ ಬರ ಹಾಗೂ ಅತಿವೃಷ್ಟಿಯ ಹೊಡೆತಕ್ಕೆ ಸಿಲುಕಿ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿದ್ಯುತ್ ಇಲಾಖೆಯ ಅತಿಯಾದ ಲೋಡ್ ಶೆಡ್ಡಿಂಗ್‌ನಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಸಿಗದೆ ರೈತರ ಬೆಳೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಆರೋಪಿಸಿರುವ ಚೂನಪ್ಪ ಪೂಜೇರಿ, ಕೂಡಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸಿ 12 ಗಂಟೆಗಳ ಕಾಲ ಗುಣಮಟ್ಟದ 3-ಫೇಸ್ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದ್ದಾರೆ.

Share with Friends
author avatar
Digital Desk