BlogLatestTop Storiesಬೆಂಗಳೂರು-Bengaluru

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ

ಬೆಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಪ್ರತಿಭಟನೆ ನಡೆಸಲಾಯಿತು. ಸಿಲಿಕಾನ್ ಸಿಟಿಯ ಅನೇಕ ಕಡೆ ಪ್ರತಿಭಟಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಲಾಯಿತು.

ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡುತ್ತಿರುವವರಿಗೆ ಪ್ರತಿಭಟನೆ ಮಾಡದಂತೆ, ಫ್ರೀಡಂ ಪಾರ್ಕ್ ಹೋಗಿ ಪ್ರತಿಭಟನೆ ಮಾಡುವಂತೆ ಪೊಲೀಸರು ಎಚ್ಚರಿಕೆ ನೀಡಿದರು.

ಆದರೆ ಪೊಲೀಸರ ಮನವಿಗೆ ಕ್ಯಾರೆ ಎನ್ನದ ಹಿಂದೂಪರ ಕಾರ್ಯಕರ್ತರು ಕೇಸರಿ ಬಾವುಟ ಹಿಡಿದು ಪ್ರತಿಭಟನೆ ಮುಂದುವರೆಸಿದರು.

Share with Friends
author avatar
News Desk