Latestಚುನಾವಣೆ-Electionರಾಜಕೀಯ | Politicsರಾಷ್ಟ್ರೀಯ-National

ಅಮೇಥಿ ಬದಲು ರಾಯ್‌ಬರೇಲಿಯಿಂದ ರಾಹುಲ್ ಕಣಕ್ಕೆ

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ (Raebareli) ಹಾಗೂ ಅಮೇಥಿ (Amethi) ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ನೇಮಕ ಮಾಡಿದ್ದು, ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿಯವರು (Rahul Gandhi) ರಾಯ್ ಬರೇಲಿಯಿಂದ ಸ್ಪರ್ಧೆ ಮಾಡಿದರೆ, ಕಿಶೋರಿ ಲಾಲ್ ಶರ್ಮಾ (Kishore Lal Sharma) ಆಮೇಥಿಯಿಂದ (Amethi) ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ.

ಐದನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಸೋಲಿಸಿದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ರಾಯ್ ಬರೇಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಪ್ರೀತಿಸಿದ ಹುಡುಗಿಯನ್ನ ಕರೆದೊಯೊದ ಮಗ- ಶಿಕ್ಷೆ ಅನುಭವಿಸಿದ ತಾಯಿ

https://youtu.be/UL9s6ben-sE?si=Tyi9t8a-sNeZ-hKB

ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಎರಡು ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸದಸ್ಯರಾದ ನಂತರ ರಾಯ್ ಬರೇಲಿ ಸ್ಥಾನವನ್ನು ತೆರವು ಮಾಡಲಾಗಿತ್ತು. ರಾಹುಲ್ ಗಾಂಧಿ ಈಗಾಗಲೇ ಕೇರಳದ ವಯನಾಡಿನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ

https://youtu.be/L_NVdLRw1yE?si=8fgzTYPlef4gqmIX

Share with Friends
author avatar
News Desk