LatestTop Storiesರಾಜಕೀಯ | Politicsರಾಷ್ಟ್ರೀಯ-National

ದೆಹಲಿಯಲ್ಲಿ ಬೀದಿಗಿಳಿದ ಕಾಂಗ್ರೆಸ್‌, ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು

ನವದೆಹಲಿ 21: ದೆಹಲಿಯಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ ದೆಹಲಿಯಲ್ಲಿ ವಿಪಕ್ಷ ಕಾಂಗ್ರೆಸ್‌ ಲೋಕ ಕಲ್ಯಾಣ್ ಮಾರ್ಗದ ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಕಾಂಗ್ರೆಸ್ ಪ್ರತಿಭಟನೆ

ಪ್ರತಿಭಟನೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕದ ಸಿಎಂ ಡಿ ಕೆ ಶಿವಕುಮಾರ್​ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಸಹ ಹಾಜರಿದ್ದರು.

ಇನ್ನು ನಿನ್ನೆ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಗಳಿಗೆ ಅವರಿಂದ ಉತ್ತರಗಳನ್ನು ಕೋರಲು ನಾವು ಪ್ರಧಾನಿ ಮೋದಿ ಅವರ ಮನೆಗೆ ಮೆರವಣಿಗೆ ನಡೆಸಿದ್ದೇವೆ. ಸರ್ಕಾರ ಯಾವುದೇ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ, ಅಥವಾ ಸಂಸತ್ತಿನಲ್ಲಿ ಅದರ ಬಗ್ಗೆ ಚರ್ಚೆ ನಡೆಸಲು ಬಯಸುತ್ತಿಲ್ಲ. ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ್ದಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನೂ ಪ್ರಧಾನಮಂತ್ರಿಯವರ ನಿವಾಸವು ಭದ್ರತಾ ವಲಯವಾಗಿರುವ ಹಿನ್ನೆಲೆ, ಪ್ರತಿಭಟನೆ ಅಂತ್ಯಗೊಳಿಸುವಂತೆ ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ಆದ್ರೆ ಪೊಲೀಸರ ಮನವಿಗೆ ಒಪ್ಪದ ಹಿನ್ನೆಲೆ ರಾಹುಲ್‌ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್‌ ನಾಯಕರನ್ನ ವಶಕ್ಕೆ ಪಡೆದರು.

Share with Friends
author avatar
Digital Desk