ಮುಂದಿನ 6 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ
ಬೆಂಗಳೂರು: ಸಿಲಿಕಾನ್ ಸಿಟಿ (Silicon City) ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದುಮುಂದಿನ (Rain) 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಮಂದಿ ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದರು. ಆದರೆ ಕಳೆದ ಎರಡು ದಿನಳಿಂದ ಬಂದ ಮಳೆಗೆ ಹಾಟ್ ಸಿಟಿಯಾಗಿದ್ದ ಬೆಂಗಳೂರು ಈಗ ಕೂಲ್ ಸಿಟಿಯಾಗಿ ಬದಲಾಗಿದೆ. ರಾಜ್ಯದಲ್ಲಿ ಇಂದಿನಿಂದ ಬರುವ 6 ದಿನಗಳ ಕಾಲ ಮಳೆ ಬರುವ ಸಾಧ್ಯೆತೆ ಇದೆ.ಇದನ್ನೂ ಓದಿ: ಮುಂದುವರೆಯಲಿದೆ JDS-BJP ಮೈತ್ರಿ: ಬಿಎಸ್‌ವೈ
ಇಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ಪ್ರಕರಣ: ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್
