LatestTop StoriesWeatherಬೆಂಗಳೂರು-Bengaluru

ರಾಜ್ಯದಲ್ಲಿ ವರ್ಷಾಧಾರೆ ಚುರುಕು; ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು.ಸೆ.27- ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದಲ್ಲಿ ಮಳೆ ಚಟುವಟಿಕೆ ಚುರುಕಾಗಲಿದೆ. ನಾಳೆ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಬಹುದು. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆ ಇದೆ.

ನಾಳೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಇದಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Share with Friends
author avatar
Digital Desk