ಹೃದಯ ಕಾಯಿಲೆಯಿಂದ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
ಹಾಗಾಗ ತನ್ನ ಸ್ಟೈಲ್ (Style) ವಿವಿದಾಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸವಂತ್ (Rakhi Savanth) ಇದೀಗ ಆಸ್ಪತ್ರೆಗೆ (Hospital) ದಾಖಲಾಗಿದ್ದರೆ. ಬಾಲಿವುಡ್ನಲ್ಲಿ (Bollywood) ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ (Social Media) ಹೆಸರು ಹೊಂದಿದ್ದಾರೆ
ರಾಖಿ ಸವಂತ್ ಅವರು ಗಂಭೀರ ಹೃದಯ ಕಾಯಿಲೆಯಿಂದ ಬಳಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದ್ದಕ್ಕಿದ್ದಂತೆ ಅವರ ಆರೋಗ್ಯ ತೀರ ಹದಗೆಟ್ಟಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಾಖಿ ಸಾವಂತ್ ಅವರು ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಮೂವರು ಅಪ್ರಾಪ್ತರು ಸೇರಿ 6 ಮಂದಿ ಬಂಧನ

ರಾಖಿ ಸಾವಂತ್ ಅವರ ಈ ಫೋಟೋಗಳನ್ನು ನೋಡಿದರೆ ಆಕೆಗೆ ಪ್ರಜ್ಞೆ ಇಲ್ಲದೇ ಮಲಗಿದ್ದಾರಾ ಅಥವಾ ಗಾಢ ನಿದ್ರೆಯಲ್ಲಿದ್ದಾರೋ ಎಂಬುದು ತಿಳಿದಿಲ್ಲ. ಫೋಟೋದಲ್ಲಿ ನರ್ಸ್ ಬಿಪಿ ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಹಿಂಭಾಗದಲ್ಲಿ ದೊಡ್ಡ ಇಸಿಜಿ ಯಂತ್ರವನ್ನೂ ಅಳವಡಿಸಲಾಗಿದೆ. ಸದ್ಯ ಆಕೆಗೆ ಗಂಭೀರ ಹೃದಯ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನಟಿಗೆ ಏನಾಗಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಕೊಲೆ – ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ
ರಾಖಿ ಸಾವಂತ್ ಈ ಹಿಂದೆಯೂ ಆಸ್ಪತ್ರೆಗೆ ದಾಖಲಾಗಿದ್ದರು. ತನ್ನ ಹೊಟ್ಟೆಯಲ್ಲಿ ಗಡ್ಡೆ ಇತ್ತು ಅದಕ್ಕಾಗಿ ಆಪರೇಷನ್ ಮಾಡಲಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ- ಯೆಲ್ಲೋ ಅಲರ್ಟ್ ಜಾರಿ
