ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ (Rave Party) ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ಸಿಸಿಬಿ (CCB) ಪೊಲೀಸರು ಐದು ಮಂದಿಯ ಬ್ಯಾಂಕ್ ಅಕೌಂಟ್‌ಗಳನ್ನ ಸೀಜ್ ಮಾಡಿದ್ದಾರೆ.
ಸಿಸಿಬಿ ಪೊಲೀಸರು (CCB Police) ಬಂಧಿತ ಐವರು ಆರೋಪಿಗಳ ಅಕೌಂಟ್‍ನಲ್ಲಿದ್ದ ಹಣವನ್ನು ಸೀಜ್ ಮಾಡಿದ್ದಾರೆ. ಆರೋಪಿಗಳ ಅಕೌಂಟ್‍ನಲ್ಲಿ ಲಕ್ಷಲಕ್ಷ ಹಣ ಪತ್ತೆಯಾಗಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಎಲ್ಲಾ ಅಕೌಂಟ್‍ಗಳನ್ನ ಫ್ರೀಜ್ ಮಾಡಿಸಿದ್ದಾರೆ. ಅಲ್ಲದೆ ಆರೋಪಿಗಳ ಮೊಬೈಲ್ ಮಿರರ್ ಇಮೇಜ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್-ಅಮೆರಿಕ ದೋಸ್ತಿ – ಮಿಲಿಟರಿ ನೆರವು ನೀಡಲು ನಿರ್ಧಾರ

ಬೇರೆ ಎಲ್ಲೆಲ್ಲಿ ರೇವ್ ಪಾರ್ಟಿ ಮಾಡಿಸಿದ್ರು..? ಯಾರೆಲ್ಲ ಭಾಗಿಯಾಗಿದ್ರು..?, ರೇವ್ ಪಾರ್ಟಿಗೆ ಎಷ್ಟು ಹಣ ವಸೂಲಿ ಮಾಡ್ತಿದ್ರು..? ಡ್ರಗ್ಸ್ ಎಲ್ಲಿಂದ ಬರ್ತಿತ್ತು..?, ಎಲ್ಲ ಮಾಹಿತಿ ಪತ್ತೆ ಮಾಡಲು ಮೊಬೈಲ್ ಮಿರರ್ ಇಮೇಜಿಂಗ್ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಐವರು ಆರೋಪಿಗಳನ್ನ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಕೂಡ ತಯಾರಿ ನಡೆಯುತ್ತಿದೆ.ಇದನ್ನೂ ಓದಿ: ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿ ಕೃತ್ಯ- ಓರ್ವ ಬಂಧನ
ಸೋಮವಾರ ಕೋರ್ಟ್ ಗೆ ಅರ್ಜಿ ಹಾಕಿ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಸಿಬಿ ಹಾಗೂ ಆರೋಪಿಗಳ ವಿಚಾರಣೆ ನಡೆಸಲ್ಲಿದ್ದಾರೆ. ಬಳಿಕ ನಟಿ ಹೇಮ ಸೆರಿದಂತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಕಾನ್ ಚಿತ್ರೋತ್ಸವದಲ್ಲಿ ಕನ್ನಡದ ಹುಡುಗನ ಚಿತ್ರಕ್ಕೆ ಮೊದಲ ಬಹುಮಾನ
ವಾಸು ಎಂಬಾತನ ಹುಟ್ಟುಹಬ್ಬದ ಅಂಗವಾಗಿ Sunset To Sun Rise victory ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಜಮಾವಣೆಗೊಂಡಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿತ್ತು. ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಿಲೀಸ್ ಆಗಲಿದೆ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡು
ಪಾರ್ಟಿಯಲ್ಲಿ ಭಾಗಿಯಾಗಿದ್ದ 73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ತೆಲುಗು ಕಿರುತೆರೆ ನಟಿ ಹೇಮಾ(ಕೃಷ್ಣವೇಣಿ) ಪಾಲ್ಗೊಂಡಿರುವುದು ಕೂಡ ಬಯಲಾಗಿತ್ತು. ಇದನ್ನೂ ಓದಿ: ಕಾಂಬೋಡಿಯಾದಲ್ಲಿ 60 ಮಂದಿ ಮೋಸದ ಉದ್ಯೋಗ ಜಾಲಕ್ಕೆ ; ಜಾಲಕ್ಕೆ ಸಿಲುಕಿದ್ದ ಭಾರತೀಯರ ರಕ್ಷಣೆ- ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್
