LatestTop Storiesಮೈಸೂರು-Mysuru

16 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ

ಮೈಸೂರು.ಅ.14-ರಾಜ್ಯದಲ್ಲಿ ಶಿಕ್ಷಕರ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಶಿಕ್ಷಕರ ಕೊರತೆಯನ್ನು ನಿವಾರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿತ್ತು. ತಮ್ಮ ಅವಧಿಯಲ್ಲಿ ಹಂತ ಹಂತವಾಗಿ ಕೊರತೆಯನ್ನು ನಿವಾರಿಸುವ ಕೆಲಸ ಮಾಡಲಾಗಿದೆ. ಇದೀಗ ಹೆಚ್ಚುವರಿಯಾಗಿ 16 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು,ಈ ವರ್ಷದ ಅಂತ್ಯದೊಳಗೆ ಅದನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ,ಇದು ಬಹಳ ಕೆಟ್ಟ ವಿಚಾರ.ನಾನು ಅಷ್ಟನ್ನೇ ಹೇಳಬಲ್ಲೆ.ಈ ವಿಷಯದ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ.ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿಚಾರಕ್ಕೆ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.ಹೀಗಾಗಿ ಈ ಬಗ್ಗೆ ನಾನು ಮತ್ತೇನನ್ನೂ ಹೇಳುವುದಿಲ್ಲ ಎಂದರು.

ಕೇAದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದ ಅವರು, ದಿನ ಬೆಳಗಾದರೆ ಸುಮ್ಮನೆ ಮಾಡುವ ಆರೋಪಗಳಿಗೆಲ್ಲ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ.ನನಗೆ ಇಲಾಖೆಯ ಕೆಲಸಗಳಿದ್ದು, ಅವುಗಳನ್ನು ನಿರ್ವಹಿಸುವುದರತ್ತ ಗಮನ ಹರಿಸಿದ್ದೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನೇತೃತ್ವದಲ್ಲಿ ಸರ್ಕಾರದಲ್ಲಿ ಸ್ವತಂತ್ರವಾಗಿ ಕೆಲಸ ಮಾಡಿದ್ದೇನೆ. ಅವರೊಂದಿಗಿನ ಉತ್ತಮ ಕ್ಷಣಗಳನ್ನು ಮಾತ್ರ ನೆನಪಿಟ್ಟುಕೊಳ್ಳುತ್ತೇನೆ. ಉಳಿದ ಅನಗತ್ಯ ವಿಚಾರಗಳ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Share with Friends
author avatar
Digital Desk