Latestರಾಜ್ಯ-Karnataka

ಶಾಸಕ ವಿನಯ್ ಕುಲಕರ್ಣಿಗೆ ರಿಲೀಫ್ : ಧಾರವಾಡ ಪ್ರವೇಶಕ್ಕೆ ಕೋರ್ಟ್ ಅನುಮತಿ

ಧಾರವಾಡ: ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಧಾರವಾಡ ಪ್ರವೇಶಕ್ಕೆ ಇದ್ದ ಷರತ್ತನ್ನು ನ್ಯಾಯಾಲಯ ಸಡಿಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಇನ್ಮುಂದೆ ವಿನಯ್ ಕುಲಕರ್ಣಿ ಧಾರವಾಡಕ್ಕೆ ತೆರಳಲು ಅವಕಾಶ ನೀಡಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪದ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸದಂತೆ ಷರತ್ತು ವಿಧಿಸಲಾಗಿತ್ತು. ಧಾರವಾಡಕ್ಕೆ ತೆರಳಲು ಹೈಕೋರ್ಟ್ ಕೂಡ ಈ ಹಿಂದೆ ಅನುಮತಿ ನಿರಾಕರಿಸಿತ್ತು.

ಸಾಕ್ಷ್ಯ ನಾಶ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ವಿಧಿಸಲಾಗಿದ್ದ ಷರತ್ತನ್ನು ರದ್ದುಪಡಿಸುವಂತೆ ವಿನಯ್ ಕುಲಕರ್ಣಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಇದೀಗ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಧಾರವಾಡಕ್ಕೆ ತೆರಳಲು ಇದ್ದ ನಿರ್ಬಂಧವನ್ನು ರದ್ದುಪಡಿಸಿ ಆದೇಶಿಸಿದೆ. ಆದರೆ ಧಾರವಾಡಕ್ಕೆ ತೆರಳುವ ವೇಳೆ ಯಾವುದೇ ಮೆರವಣಿಗೆ, ಸಾರ್ವಜನಿಕ ಪ್ರದರ್ಶನ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

Share with Friends
author avatar
Digital Desk