Crime NewsLatestಬೆಂಗಳೂರು-Bengaluruರಾಜ್ಯ-Karnataka

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy murder case) ನಾಲ್ವರು ಆರೋಪಿಗಳನ್ನ ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumakuru jail) ಸ್ಥಳಾಂತರಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‍ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ (Court) ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆದೇಶ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನ ಸ್ಥಳಾಂತರಿಸಿದ್ದಾರೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ

https://youtu.be/97Xqp_kxIBQ?si=qBBl9qDu-tzd3v8Y

ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಆದೇಶಿಸಿತ್ತು. ಇದನ್ನೂ ಓದಿ: ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ

https://youtu.be/OvXrOZlPR8I?si=v87msBIsrV3H4WYY

ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಲ್ಲರೂ ಒಂದೇ ಕಡೆ ಇರುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಕೆಲವರನ್ನು ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಸಿಎಂ

Share with Friends
author avatar
News Desk