BlogEntertainmentLatestTop Stories

ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು,

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ, ಟಾರ್ಚರ್ ಕೊಟ್ಟು ಭಯಾನಕವಾಗಿ ಕೊಂದ ಪ್ರಕರಣದಲ್ಲಿ 84 ದಿನಗಳ ನಂತರ ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ3991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ರೇಣುಕಾಸ್ವಾಮಿ ಮಾಡುತ್ತಿದ್ದ ಅಶ್ಲೀಲ ಮೆಸೇಜ್‌ಗಳಿಂದ ಹಿಡಿದು ಕಿಡ್ನಾಪ್, ಟಾರ್ಚರ್, ಮರ್ಡರ್, ಸಾಕ್ಷ್ಯನಾಶ ಯತ್ನ, ಆರೋಪಿಗಳ ಬಂಧನದ ತನಕ ಇಡೀ ಪ್ರಕರಣವನ್ನು ಚಾರ್ಜ್‌ಶೀಟ್‌ನಲ್ಲಿ ಇಂಚಿಂಚಾಗಿ ವಿವರಿಸಲಾಗಿದೆ.

17 ಆರೋಪಿಗಳ ವಿರುದ್ಧ ಸಲ್ಲಿಕೆಯಾಗಿರುವ ಚಾರ್ಜ್​ಶೀಟ್​ನಲ್ಲಿ 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.

ಆರೋಪಿಗಳ ವಿರುದ್ಧ ಅಪಹರಣ, ಕೊಲೆ, ಸಾಕ್ಷ್ಯನಾಶ, ಒಳಸಂಚು ದರೋಡೆ, ಕಾನೂನುಬಾಹಿರವಾಗಿ ಗುಂಪು ಸೇರುವಿಕೆ ಹೀಗೆ ಹಲವು ಆರೋಪಗಳನ್ನು ಹೊರಿಸಲಾಗಿದೆ. ಆದರೆ ಇದು ಪ್ರಾಥಮಿಕ ದೋಷಾರೋಪ ಪಟ್ಟಿ ಅಷ್ಟೇ. ತನಿಖೆ ಇನ್ನೂ ಬಾಕಿಯಿದೆ. ತನಿಖೆ ಪೂರ್ಣಗೊಂಡ ಬಳಿಕ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪತ್ನಿಗೆ ಕರೆ ಮಾಡಿ ಮಾತನಾಡಿದ ನಟ ದರ್ಶನ್‌ :
ಬಳ್ಳಾರಿ ಸೆಂಟ್ರಲ್ ಜೈಲ್‌ನ ಲ್ಯಾಂಡ್ ಲೈನ್​ನಿಂದ ಪತ್ನಿ ವಿಜಯಲಕ್ಷ್ಮಿ ನಂಬರ್‌ಗೆ ದರ್ಶನ್​ ಕರೆ ಮಾಡಿದ್ದಾರೆ. ಅತ್ತ ಕಡೆಯಿಂದ ವಿಜಯಲಕ್ಷ್ಮಿ ಫೋನ್ ರಿಸೀವ್ ಮಾಡುತ್ತಿದ್ದಂತೆಯೇ ದರ್ಶನ್ ಭಾವುಕರಾಗಿದ್ದಾರೆ. 5 ನಿಮಿಷಗಳ ಕಾಲ ಅವರು ಎಮೋಷನಲ್​ ಆಗಿಯೇ ಮಾತನಾಡಿದ್ದಾರೆ. ಕುಟುಂಬಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿಯಲು ಪ್ರಯತ್ನಿಸಿದ್ದಾರೆ.

ನಟ ದರ್ಶನ್​ ಪ್ರಮುಖ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಕೇಸ್​ನ ಜಾರ್ಜ್​ಶೀಟ್​ ಇಂದು (ಸೆ.4) ಸಲ್ಲಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗಿದೆ. ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿದುಕೊಳ್ಳಲು ದರ್ಶನ್​ ಹಾತೊರೆಯುತ್ತಿದ್ದಾರೆ. ಆದರೆ ಕುಟುಂಬದವರ ಜೊತೆ ಮಾತನಾಡುವುದು ಅಷ್ಟು ಸುಲಭವಲ್ಲ. ಬಳ್ಳಾರಿ ಜೈಲಿನಲ್ಲಿ ಇರುವ ಅವರು ಕೇವಲ 5 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ. ಆದರೆ ಪೂರ್ತಿ ವಿಷಯ ತಿಳಿದುಕೊಳ್ಳುವುದಕ್ಕೂ ಮುನ್ನವೇ ಅವಧಿ ಮುಕ್ತಾಯ ಆಗಿದ್ದರಿಂದ ದರ್ಶನ್​ ಪರದಾಡಿದ್ದಾರೆ ಎನ್ನಲಾಗಿದೆ.

ರೇಣುಕಾ ಸ್ವಾಮಿ ತಂದೆ ಪ್ರತಿಕ್ರಿಯೆ :
ಜಾರ್ಜ್​ಶೀಟ್ ಕುರಿತು ಮಾತನಾಡಿದ ರೇಣುಕಾಸ್ವಾಮಿ ತಂದೆ ಜಾರ್ಜ್​ಶೀಟ್​ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಅದರ ಪ್ರತಿ ಸಿಗುವುದು ತಡವಾಗುತ್ತದೆ ಅಂತ ಅಧಿಕಾರಿಗಳು ನಮಗೆ ಹೇಳಿದ್ದಾರೆ. ಸಿಕ್ಕ ಬಳಿಕ ಅದರಲ್ಲಿ ಏನಿದೆ ಅಂತ ತಿಳಿದುಕೊಂಡು ಮಾತನಾಡುತ್ತೇನೆ’ ಎಂದು ರೇಣುಕಾಸ್ವಾಮಿ ತಂದೆ ಹೇಳಿದ್ದಾರೆ.

Share with Friends
author avatar
News Desk