BlogEntertainmentLatestTop Stories

ರಾಗಿಣಿ, ಶುಭಾ ಅಶ್ಲೀಲ ಮೆಸೆಜ್ ಕಳಿಸಿದ್ದ ಕೊಲೆಯಾದ ರೇಣುಕಾಸ್ವಾಮಿ

ಬೆಂಗಳೂರು : ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ನಟಿ ಪವಿತ್ರಾ ಗೌಡ ಅವರಿಗೆ ಮಾತ್ರವಲ್ಲದೆ ಕನ್ನಡದ ನಟಿಯರಾದ ರಾಗಿಣಿ ದ್ವಿವೇದಿ , ಶುಭಾ ಪೂಂಜಾ ಅವರಿಗೂ ಅಷ್ಲೀಲಾ ಮೆಸೇಜ್ ಕಳಿಸಿದ್ದ ಎಂಬ ವಿಷಯ ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಆಂಡ್ ಗ್ಯಾಂಗ್ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು, ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್‌ಶೀಟ್‌ ನಲ್ಲಿ ಸ್ಫೋಟಕ ವಿಷಯಗಳು ಬಯಲಾಗುತ್ತಿವೆ. ಕೊಲೆಯ ಹಿಂದಿನ ಕಾರಣಗಳು ಬಯಲಿಗೆ ಬರುತ್ತಿವೆ. ನಟಿ ಪವಿತ್ರಾಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಕೊಲೆ ಆಗಿದೆ ಎಂಬುವುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಈ ಮಧ್ಯೆ ಆತ ಕೇವಲ ಪವಿತ್ರಾಗೆ ಮಾತ್ರ ಮೆಸೇಜ್ ಕಳುಹಿಸಿರಲಿಲ್ಲ. ಕನ್ನಡದ ಸ್ಟಾರ್ ನಟಿಯರಿಗೂ ಅಶ್ಲೀಲ ಮೆಸೆಜ್ ಕಳುಹಿಸಿದ್ದ ಎಂಬುವುದು ದೃಢ ಪಟ್ಟಿದೆ.

ನಟಿ ರಾಗಿಣಿ ದ್ವಿವೇದಿ , ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು ವಿನಯ್‍ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವಾರು ನಟಿಯರಿಗೆ ಅಶ್ಲೀಲ ಮೆಸೆಜ್ ಕಳುಹಿಸಿದ್ದಾನೆ ಎಂಬುವುದು ಉಲ್ಲೇಖವಾಗಿದೆ.

ರೇಣುಕಾಸ್ವಾಮಿ ಮೊಬೈಲ್ ನಲ್ಲಿ ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಇನ್ನೂ ಹಲವಾರು ನಟಿಯರಿಗೆ ಅಶ್ಲೀಲ ಮಸೇಜ್ ಕಳುಹಿಸಿದ್ದನ್ನು ನೋಡಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ ಎಂಬುವುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.

Share with Friends
author avatar
News Desk