Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್‌ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ (HD.Revanna) ಈಗಾಗಲೇ ಜೈಲುಪಾಲಾಗಿದ್ದಾರೆ. ನಿನ್ನೆ ಎಸ್‌ಐಟಿ (SIT) ಕಸ್ಟಡಿ ಅವಧಿ ಅಂತ್ಯ ಬಳಿಕ ಅವರಿಗೆ ಕೋರ್ಟ್ (Court) ನ್ಯಾಯಾಂಗ ಬಂಧನ ವಿಧಿಸಿತ್ತು. ಪರಪ್ಪನ ಅಗ್ರಹಾರದಲ್ಲಿ (Parapanna Agrahara) ಸಾಮಾನ್ಯ ಕೈದಿಗಳಂತೆ ರೇವಣ್ಣ ಸೆರೆವಾಸ ಅನುಭವಿಸುತ್ತಿದ್ದಾರೆ.

ರಾಜಕಾರಣಿಯಾಗಿ, ಶಾಸಕರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ, ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿ 1 ರಾತ್ರಿ ಕಾಲ ಕಳೆದಿದ್ದಾರೆ. ರಾತ್ರಿ ಅವರಿಗಾಗಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆಯನ್ನು ಪಡೆದಿದ್ದಾರೆ.ಇದನ್ನೂ ಓದಿ: ಭಾರತಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

https://youtu.be/Hv8A55wcj-Q?si=_oyZPuxncc91u0z4

ರೇವಣ್ಣ ಅವರು ರಾತ್ರಿ ತಡವಾಗಿ ಉಡ ಮಾಡಿ ಮೌನಕ್ಕೆ ಜಾರಿದ್ದಾರೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಯೋಚಿಸುತ್ತ ಬಳಿಕ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಅವರ ಆರೋಗ್ಯ ಸರಿ ಇಲ್ಲದ ಕಾರಣ ನಿನ್ನೆ ರಾತ್ರಿ ಜೈಲಾಧಿಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ಅವರ ಕೊಠಡಿ ಬಳಿ ಓರ್ವ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು. ಇಂದು ಬೆಳೆಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ.

ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದರಿಂದ 17ನೇ ACCM ರೇವಣ್ಣರನ್ನು ನಿನ್ನೆ ಹಾಜರು ಪಡಿಸಲಾಗಿತ್ತು. ಕೋರ್ಟ್ಗೆ ರಿಮಾಂಡ್ ಅರ್ಜಿ ಸಲ್ಲಿಸಿದ ಎಸ್‌ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಎರಡು ಕಡೆಯ ವಾದ ಆಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾರ್ಚ್ 14 ರವರೆಗೆ ಹೆಚ್.ಡಿ.ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಇದನ್ನೂ ಓದಿ: ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ

ಇದೇ ವೇಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ

ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ರೇವಣ್ಣ ಆಘಾತಕ್ಕೆ ಒಳಗಾಗಿದ್ದರು. ಕೋರ್ಟ್ ಹಾಲ್‌ನಿಂದ ಹೊರಬರುವಾಗ ರೇವಣ್ಣ ಕಣ್ಣೀರು ಹಾಕಿದ್ದರು. ಬಿಗಿ ಬಂದೋಬಸ್ತ್ನಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಜತೆ ಪೋನ್‌ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ

https://youtu.be/tt86zgUAArE?si=tGYqV1A_9H4K7Kmx

ಪರಪ್ಪನ ಅಗ್ರಹಾರ ಜೈಲು ಸೇರಿದ ರೇವಣ್ಣಗೆ, ವಿಚಾರಣಾಧೀನ ಕೈದಿ ಸಂಖ್ಯೆ 4567 ನೀಡಲಾಗಿದೆ. ಕಳೆದ ಮೂರು ದಿನಗಳಿಂದ ನಿದ್ದೆಯಿಲ್ಲದೇ ಎಸ್‌ಐಟಿ ವಿಚಾರಣೆ ಎದುರಿಸಿದ್ದ ರೇವಣ್ಣ, ಜೈಲು ಹಕ್ಕಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಮುಂದುವರೆಯಲಿದ್ದು, ಹೆಚ್.ಡಿ.ರೇವಣ್ಣ ಜಾಮೀನು ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಕಿಡ್ನಾಪ್ ಪ್ರಕರಣ: ರೇವಣ್ಣ ಜೈಲುಪಾಲು

Share with Friends
author avatar
News Desk