LatestTop Storiesಸ್ಯಾಂಡಲ್​ವುಡ್-Sandalwood

ಪಂಚಭೂತಗಳಲ್ಲಿ ಲೀನರಾದ ಗಾನ ಕೋಗಿಲೆ ಜಾನಕಮ್ಮ

ಮೈಸೂರು,ಜು.12 : ದಕ್ಷಿಣ ಭಾರತದ ಗಾನ ಕೋಗಿಲೆ ಎಸ್.ಜಾನಕಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಮೈಸೂರು ಎಚ್‌ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿರುವ ಫಾರಂ ಹೌಸ್‌ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

3 ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಕೆ

ಇನ್ನು ಮೊಮ್ಮಗಳು (ಮಗನ ಮಗಳು) ಅಪ್ಸರಾ ಅಂತ್ಯಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.ಇದಕ್ಕು ಮೊದಲು 3 ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಇದೇ ವೇಳೆ ಆಗಮಿಕ ರಮೇಶ್ ಶರ್ಮ ನೇತೃತ್ವದಲ್ಲಿಅಂತಿಮ ವಿಧಿವಿಧಾನಗಳು ನೆರವೇರಿದವು.ಪಂಚಗವ್ಯದಿಂದ ದೇಹ ಶುದ್ದೀಕರಣ ಮಾಡಿ ನಂತರ ಬ್ರಾಹ್ಮಣ ಸಂಪ್ರದಾಯದ ವಿಧಿವಿಧಾನಗಳು ನಡೆದವು.ಅಲ್ಲದೆ, ಕಾಡು ಕಟ್ಟಿಗೆಗಳ ಜೊತೆಗೆ ಗಂಧ ಮತ್ತು ತುಳಸಿ ಕಟ್ಟಿಯಿಂದ ಚಿತೆ ನಿರ್ಮಾಣ ಮಾಡಲಾಗಿತ್ತು. ಸೂರ್ಯಾಸ್ತದ ಮುನ್ನ ಅಗ್ನಿಸ್ಪರ್ಶ ಮಾಡಲಾಯಿತು.

ಬ್ರಾಹ್ಮಣ ಸಂಪ್ರದಾಯದಂತೆ ಜರುಗಿದ ವಿಧಿವಿಧಾನಗಳು

ಇನ್ನು ಎಸ್.ಜಾನಕಿ ಅಂತ್ಯಸಂಸ್ಕಾರದ ವೇಳೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದರು. ನಟ-ನಟಿಯರು, ಸಚಿವರು, ಶಾಸಕರು, ಗಣ್ಯರು, ಪೊಲೀಸರು, ಜಾನಕಮ್ಮನವರ ಕುಟುಂಬಸ್ಥರು ಗಾಯಕಿಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಅಂತ್ಯಸಂಸ್ಕಾರ ನಡೆಯಿತು.

ಅಂತ್ಯಕ್ರಿಯೆಗೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾವಿರಾರು ಅಭಿಮಾನಿಗಳು ಮತ್ತು ಚಲನಚಿತ್ರೋದ್ಯಮದ ಗಣ್ಯರು ಗೌರವ ಸಲ್ಲಿಸಿದರು.

Share with Friends
author avatar
Digital Desk