EntertainmentLatestTop Storiesಬಾಲಿವುಡ್​ - Bollywoodಮೈಸೂರು-Mysuruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ

ಮೈಸೂರು, ಜು.11 : ಪ್ರಸಿದ್ಧ ಖ್ಯಾತ ಗಾಯಕಿ ಎಸ್. ಜಾನಕಿ(88) ಇನ್ನಿಲ್ಲ.
ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾಗಿದ್ದ ಎಸ್. ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇದೀಗ ಅವರು ವಿಧಿವಶರಾಗಿದ್ದು,ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಸಿದ್ಧ ಖ್ಯಾತ ಗಾಯಕಿ ಎಸ್ ಜಾನಕಿ ಇನ್ನಿಲ್ಲ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಗಾಯಕಿ ಎಸ್. ಜಾನಕಿ ಅವರು ಜನಿಸಿದ್ದರು. ತಮ್ಮ ಮೂರನೆಯ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರಹೊಮ್ಮಿಸಿದ ಜಾನಕಿ, ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬುವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದ್ದರು.
1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಜಾನಕಿ ಅವರು ಹಾಡಿದ ಪ್ರಥಮ ಚಿತ್ರವಾಗಿತ್ತು. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದ್ದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದ್ದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾಗಿದ್ದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಹರಿಸಿದ್ದರು.
‘ನೋಡು ಬಾ ನೋಡು ಬಾ ನಮ್ಮೂರ’, ‘ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೇ’, ‘ಯುಗ ಯುಗಾದಿ ಕಳೆದರೂ’, ‘ಹೇಳೇ ಗೆಳತಿ ಪ್ರಿಯ ಮಾಧವ ಬಾರನೆ ಎಂದು’, ‘ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು’, ‘ದೋಣಿ ಸಾಗಲಿ ಮುಂದೆ ಹೋಗಲಿ’, ‘ಮೂಡಣ ಮನೆಯ ಮುತ್ತಿನ ನೀರಿನ ಎರಕಾವಾ ಹೊಯ್ದ’, ‘ಜಯಗೌರಿ ಜಗದೀಶ್ವರಿ’, ‘ಆಡೋಣ ಬಾ ಬಾ ಗೋಪಾಲ’, ‘ನಂಬಿದೆ ನಿನ್ನ ನಾದ ದೇವತೆಯೇ ಅಭಿಮಾನ ತಳೆದ ತಾಯೆ ಭಾರತಿಯೇ’, ‘ಭಾರತ ಭೂಷಿರ ಮಂದಿರ ಸುಂದರಿ’, ‘ಶರಣು ವಿರೂಪಾಕ್ಷ ಶಶಿಶೇಖರ’, ‘ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರಿ’, ‘ಬಾನಲ್ಲು ನೀನೆ ಭುವಿಯಲ್ಲು ನೀನೆ’, ‘ಬಿಸಿಲಾದರೇನು ಮಳೆಯಾದರೇನು’ ಇಂತಹ ಅಸಂಖ್ಯಾತ ಸುಮಧುರ ಕನ್ನಡ ಗೀತೆಗಳಿಗೆ ಅವರು ದನಿಯಾಗಿದ್ದರು.

Share with Friends
author avatar
Digital Desk