LatestTop Storiesಬೆಂಗಳೂರು-Bengaluru

ನಿರೀಕ್ಷಣಾ ಜಾಮೀನಿಗೆ ಶಾಂತಾ ಹೈಕೋರ್ಟ್ಗೆ ಮೊರೆ

ಬೆಂಗಳೂರು,ಸೆ.24- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಕೆಲ ದಿನಗಳ ಹಿಂದಷ್ಟೇ ಶಾಂತಾ ಹೊಸಮನಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ೫೨ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆಪಿಎಸ್‌ಸಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಾ ಹೊಸಮನಿ ವಿರುದ್ಧ ಮಹತ್ವದ ಸಾಕ್ಷಗಳು ಲಭ್ಯವಾಗಿವೆ ಎಂದು ಸಿಐಡಿ ತನಿಖೆಯಲ್ಲಿ ಹೇಳಲಾಗಿದೆ. ೩೮೪ ಕೆಎಎಸ್ ಪರೀಕ್ಷಾ ಅಕ್ರಮ ಪ್ರಕರಣದಲ್ಲೂ ಶಾಂತಾ ಹೊಸಮನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಶಾಂತಾ ಹೊಸಮನಿ ಮೂಲಕ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ೧೦ ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿಯೂ ತನಿಖಾ ಸಂಸ್ಥೆಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಭ್ಯರ್ಥಿಗಳ ವಿಚಾರವಾಗಿಯೂ ಮುಂದಿನ ಹಂತದಲ್ಲಿ ತನಿಖೆ ನಡೆಯುವ ಸಾಧ್ಯತೆ ಇದೆ.

Share with Friends
author avatar
Digital Desk