BlogEntertainmentLatestTop Storiesಸ್ಯಾಂಡಲ್​ವುಡ್-Sandalwood

ಭೈರತಿ ರಣಗಲ್‍ ಚಿತ್ರದ ರಿಲೀಸ್ ಡೇಟ್ ಅನೌನ್ಸ್

ಬಹು ನಿರೀಕ್ಷಿತ ‘ಭೈರತಿ ರಣಗಲ್‍’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ ಗ್ರಾಫಿಟ್ ಆರ್ಟ್ ಅನ್ನು ಅನಾವರಣಗೊಳಿಸುವ ಮೂಲಕ “ಭೈರತಿ ರಣಗಲ್” ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

ಈ ಮೊದಲು ಆಗಸ್ಟ್ 15 ರಂದು ಈ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ ಮುಂದೆ ಹೋಗಿತ್ತು. ಈಗ ನವೆಂಬರ್ 15 ರಂದು ರಣಗಲ್‍ ಅಭಿಮಾನಿಗಳಿಗೆ ದರ್ಶನವಾಗಲಿದೆ.

ನಿರ್ಮಾಪಕಿ ಗೀತಾ ಶಿವರಾಜಕುಮಾರ್, ನಿರ್ದೇಶಕ ನರ್ತನ್ ಹಾಗೂ ನಿವೇದಿತಾ ಶಿವರಾಜಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಗ್ರಾಫಿಟ್ ಆರ್ಟ್ ನಲ್ಲಿ ಮೂಡಿಬಂದ ಶಿವರಾಜಕುಮಾರ್ ಅವರ‌ ಲುಕ್ ಗೆ ಅಭಿಮಾನಿಗಳು ಫಿದಾ ಆದರು.

ನರ್ತನ್‍ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್‍, ರಾಹುಲ್ ಬೋಸ್‍, ಅವಿನಾಶ್, ದೇವರಾಜ್‍, ಮಧು ಗುರುಸ್ವಾಮಿ, ಛಾಯಾ ಸಿಂಗ್‍, ಬಾಬು ಹಿರಣ್ಣಯ್ಯ ಮುಂತಾದವರಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

Share with Friends
author avatar
News Desk