BlogEntertainmentLatestTop Storiesಸ್ಯಾಂಡಲ್​ವುಡ್-Sandalwood

ಕುಟುಂಬ ಸಮೇತ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ

ತಿರುಪತಿ : ಇತ್ತೀಚೆಗೆ ಶಿವಣ್ಣ ನಟನೆಯ ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಸಿನಿಮಾದ ಸಕ್ಸಸ್ ಒಂದು ಕಡೆಯಾದ್ರೆ, ಮತ್ತೊಂದೆಡೆ ಶಿವರಾಜ್‌ ಕುಮಾರ್‌ ಅವರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಕೊಟ್ಟಿದ್ದಾರೆ.

ನಟ ಶಿವರಾಜ್‌ಕುಮಾರ್‌ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗುವ ಸಾಧ್ಯತೆ ಇದೆ. ಶಿವಣ್ಣ ಕುಟುಂಬದ ಜೊತೆ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಸಹ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Share with Friends
author avatar
News Desk