Latestರಾಷ್ಟ್ರೀಯ-Nationalವಾಣಿಜ್ಯ

ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

ನವದೆಹಲಿ: ಅಮುಲ್‌ ಹಾಲಿನ ದರ ಏರಿಕೆ ಬೆನ್ನಲ್ಲೇ ಮದರ್ ಡೈರಿ (Mother Dairy) ಸಹ ಹಸು ಹಾಗೂ ಎಮ್ಮೆ ಹಾಲು ಸೇರಿದಂತೆ ವಿವಿಧ ಮಾದರಿಯ ಹಾಲಿನ ಬೆಲೆಯನ್ನು (Milk Prices) ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ.

ಜೂನ್‌ 3ರಿಂದಲೇ (ಇಂದು) ನಿಗದಿತ ಬೆಲೆ ಜಾರಿಗೆ ಬರಲಿದೆ ಎಂದು ಮದರ್ ಡೈರಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಇದು ಮೊದಲ ಬಾರಿಗೆ ಬೆಲೆ ಏರಿಕೆಯಾಗಿದೆ. ಟೋಕನ್‌ ಮಿಲ್ಕ್‌ 52 ರೂ. ನಿಂದ 54 ರೂ.ಗೆ ಹೆಚ್ಚಿಸಲಾಗಿದೆ. ಇನ್ನುಳಿದಂತೆ ಟೋನ್ಡ್‌ ಮಿಲ್ಕ್‌ (ಟೆಟ್ರಾ ಪ್ಯಾಕ್‌) 54 ರೂ. ನಿಂದ 56 ರೂ.ಗೆ, ಹಸುವಿನ ಹಾಲು 56 ರಿಂದ 58 ರೂ.ಗೆ, ಕೆನೆ ಹಾಲು 66 ರೂ. ನಿಂದ 68 ರೂ.ಗೆ. ಎಮ್ಮೆ ಹಾಲು 70 ರೂ. ನಿಂದ 72 ರೂ. ಹಾಗೂ ಡಬಲ್‌ ಟೋನ್ಡ್‌ ಪ್ಯಾಕೆಟ್‌ ಹಾಲಿನ ದರ 48 ರೂ. ನಿಂದ 50 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

2020 ರ ಫೆಬ್ರವರಿಯಲ್ಲಿ ಕೊನೆಯಬಾರಿಗೆ ಮದರ್‌ ಡೈರಿ ಹಾಲಿನ ದರವನ್ನು ಹೆಚ್ಚಿಸಿತ್ತು. ಸದ್ಯ ದೆಹಲಿಯ ಎನ್‌ಸಿಆರ್‌ನಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್‌ ತಾಜಾ ಹಾಲು ಮಾರಾಟ ಮಾಡಲಾಗುತ್ತೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ

https://youtu.be/r32NMq7j5QU?si=GCAJMqkl5Q3uqBm0

ಕಳೆದ ಕೆಲವು ತಿಂಗಳಲ್ಲಿ ಹಾಲಿನ ಸಂಗ್ರಹಣೆಗೆ ಹೆಚ್ಚಿನ ಬೆಲೆ ಪಾವತಿಸಿದ್ದರೂ ದರ ಏರಿಕೆ ಮಾಡಿರಲಿಲ್ಲ. ಇತ್ತೀಚೆಗೆ ಕೆಲವೆಡೆ ಬಿಸಿಲಿನ ತಾಪ ಏರಿಕೆಯಿಂದ ಹಾಲಿನ ಉತ್ಪಾದನೆ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಬೆಲೆ ಏರಿಕೆ ಮಾಡಿರುವುದಾಗಿ ಮದರ್‌ ಡೈರಿ ಹೇಳಿದೆ. ಇದನ್ನೂ ಓದಿ: ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್

Share with Friends
author avatar
News Desk