LatestTop Storiesರಾಯಚೂರು

ಶಾರ್ಟ್ ಸರ್ಕ್ಯೂಟ್ ನಿಂದ ರೇಷ್ಮೆ ಕಟ್ಟಡಕ್ಕೆ ಬೆಂಕಿ – ರಾಯಚೂರಿನಲ್ಲಿ ಮಹತ್ವದ ದಾಖಲೆಗಳು ಭಸ್ಮ

ರಾಯಚೂರು : ಶಾರ್ಟ್ ಸರ್ಕ್ಯೂಟ್ ನಿಂದ ರೇಷ್ಮೆ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿರುವ ಸರ್ಕಾರಿ ರೇಷ್ಮೆ ಇಲಾಖೆಯ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ.

ಇಂದುನಾಲ್ಕನೇ ಶನಿವಾರ ಹಿನ್ನೆಲೆ ಸರ್ಕಾರಿ ರಜೆ ಇದ್ದ ಕಾರಣ ಕಚೇರಿಯಲ್ಲಿ ಸಿಬ್ಬಂದಿ ಇರಲಿಲ್ಲ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.

ಆದರೆ ಕಚೇರಿಯಲ್ಲಿದ್ದ ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ. ಕಂಪ್ಯೂಟರ್, ಪೀಠೋಪಕರಣಗಳು ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ಮತ್ತಷ್ಟು ಹರಡದಂತೆ ತಡೆದಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಷ್ಟದ ಪ್ರಮಾಣದ ಬಗ್ಗೆ ಅಂದಾಜಿಸಲಾಗುತ್ತಿದೆ.

Share with Friends
author avatar
Digital Desk