BlogLatestTop Storiesರಾಜಕೀಯ | Politics

ಹೈಕಮಾಂಡ್ ಭೇಟಿಗೆ ತೆರಳಿದ ಸಿಎಂ, ಡಿಸಿಎಂ, ಗೃಹ ಸಚಿವ ಪರಮೇಶ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ್ ಇಂದು ದೆಹಲಿಗೆ ತೆರಳಿದ್ದಾರೆ. ವಿಶೇಷ ವಿಮಾನದಲ್ಲಿ ಮೂರು ಜನ ದೆಹಲಿಗೆ ಪ್ರಯಾಣಿಸಿದ್ದಾರೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ನಡೆದ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಲಿರುವ ನಾಯಕರು.

ಅಲ್ಲದೆ ನಿನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಶಾಸಕರು ರಾಜ್ಯಪಾಲ ನಡೆಯ ಬಗ್ಗೆ ರಾಷ್ಟ್ರಪತಿಗಳಿಗೆ ದೂರು ನೀಡಬೇಕು ಎಂದಿರುವ ಬಗ್ಗೆಯೂ ಚರ್ಚೆ ನಡೆಸಲಿರುವ ನಾಯಕರು. ಪ್ರಮುಖವಾಗಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮುಂದಿನ ಕಾನೂನು ಪ್ರಕ್ರಿಯೆಗಳಲ್ಲಿ ನಡೆಯಬಹುದಾದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ನಡುವೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಬಗ್ಗೆ ಈಗಾಗಲೇ ಕಾನೂನು ಹೋರಾಟ ಮುಂದುವರೆಸಿರುವ ಸಿಎಂ ಹೈಕಮಾಂಡ್ ನಾಯಕರ ಭೇಟಿ ಬಳಿಕ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರನ್ನ ಭೇಟಿಯಾಗುವ ಸಾಧ್ಯತೆ ಇದೆ.

ಮೊನ್ನೆ ನಡೆದ ಕೋರ್ಟ್ ವಿಚಾರಣೆಯಲ್ಲಿ ತಮ್ಮ ಪರ ವಾದ ಮಂಡಿಸಲು ಬಂದಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ರನ್ನ ಸಹ ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.

Share with Friends
author avatar
News Desk