Latestಜಿಲ್ಲಾ ಸುದ್ದಿಗಳು | District Newsವಿಜಯಪುರ-Vijayapura

ಹಿಂದೂ–ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಶ್ರೀಕೃಷ್ಣ ಜನ್ಮಾಷ್ಟಮಿ

ವಿಜಯಪುರ: ಹಿಂದೂ–ಮುಸ್ಲಿಂ ಭಾವೈಕ್ಯತೆ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ವಿವಿಧ ಶಾಲೆ, ಮಠ ಹಾಗೂ ಮಂದಿರಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಸಂಭ್ರಮ–ಸಡಗರದಿಂದ ಆಚರಿಸಲಾಯಿತು.

ಜನ್ಮಾಷ್ಟಮಿ ಅಂಗವಾಗಿ ಶಾಲಾ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆಯರ ವೇಷಭೂಷಣ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷವಾಗಿ ಮುಸ್ಲಿಂ ಕುಟುಂಬಗಳ ಮಕ್ಕಳು ಕೂಡ ಶ್ರೀಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಸಂಭ್ರಮದಲ್ಲಿ ಭಾಗವಹಿಸುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದರು.

ಶಾಲೆಗಳಲ್ಲಿ ಇಂತಹ ಕೋಮು ಸೌಹಾರ್ದತೆ ಬೆಳೆಸುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ರಾಷ್ಟ್ರೀಯ ಏಕತೆ ಹಾಗೂ ಪರಸ್ಪರ ಸಹೋದರತ್ವದ ಮನೋಭಾವ ಮೂಡಿಸುವ ಉದ್ದೇಶದಿಂದ ಜನ್ಮಾಷ್ಟಮಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪಾಲಕರು ಕೂಡ ಸಹಕಾರ ನೀಡಿದರು.

ಹಿಂದೂ–ಮುಸ್ಲಿಂ ಪರಸ್ಪರ ಭಾವೈಕ್ಯತೆ, ಕೋಮು ಸೌಹಾರ್ದತೆ ಹಾಗೂ ರಾಷ್ಟ್ರೀಯ ಏಕತೆಯ ಮೂಲಕ ದೇಶದ ಪ್ರಗತಿಗೆ ಕೊಡುಗೆ ನೀಡುವ ಸಂದೇಶವನ್ನು ಈ ಆಚರಣೆ ಸಾರಿತು.

ವರದಿ: ಅಶೋಕ ಗುಂಡಿನಮನಿ

Share with Friends
author avatar
Digital Desk