BlogLatestಬೆಂಗಳೂರು-Bengaluru

ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ

ಬೆಂಗಳೂರು : ಇಬ್ಬರು ಹೆಣ್ಣುಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ.

ದಾಸರಹಳ್ಳಿಯ ಕಾವೇರಿ ಬಡಾವಣೆಯೊಂದರ ಮನೆಯಲ್ಲಿ ವಾಸವಿದ್ದ ಉತ್ತರ ಭಾರತ ಮೂಲದ ರು 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನ ಮಲತಂದೆ ಭೀಕರವಾಗಿ ಕೊಂದು ಪರಾರಿ ಆಗಿದ್ದಾನೆ. ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಈಶಾನ್ಯ ವಿಭಾಗ ಡಿಸಿಪಿ ಸಜಿತ್, ‘ಮಧ್ಯಾಹ್ನ 3:30 ರ ಸುಮಾರಿಗೆ ಕೊಲೆ ನಡೆದಿದೆ. ಈ ಘಟನೆ ಸಂಬಂಧ ತಾಯಿ ಅನಿತಾ ದೂರು ನೀಡಿದ್ದಾರೆ. ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಂದೆ ಘಟನೆ ಬಳಿಕ ನಾಪತ್ತೆ ಆಗಿದ್ದಾರೆ. ಅವರಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ತನಿಖೆ ಮುಂದುವರೆದಿದೆ ಎಂದರು.

Share with Friends
author avatar
News Desk