
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ವಿದ್ಯಾರ್ಥಿ ಸಾವು
ಬೆಳಗಾವಿ: ನಗರದ ಪಿಬಿ ರಸ್ತೆಯ ಸಮೀಪ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ವೇಳೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.
ರೈಲು ಚಲಿಸುತ್ತಿರುವ ಸಂದರ್ಭದಲ್ಲೇ ವಿದ್ಯಾರ್ಥಿ ಇಳಿಯಲು ಮುಂದಾಗಿದ್ದ ಎನ್ನಲಾಗಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ರೈಲಿನಲ್ಲಿ ಪ್ರಯಾಣಿಸುವಾಗ ಕಿವಿಗೆ ಏರ್ಫೋನ್ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ. ಇದರಿಂದ ರೈಲಿನ ಶಬ್ದ ಹಾಗೂ ಅಪಾಯದ ಸೂಚನೆಗಳು ಕೇಳಿಸದೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ರೈಲ್ವೆ ಹಳಿ ದಾಟುವಾಗ ಹಾಗೂ ರೈಲಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ಚಲಿಸುತ್ತಿರುವ ರೈಲಿನಿಂದ ಇಳಿಯುವುದು ಅಥವಾ ಹತ್ತುವುದು ಮಾಡಬಾರದು ಎಂದು ರಿಸ್ಕ್ಯೂ ಟೀಮ್ನ ಪದ್ಮಪ್ರಸಾದ್ ಹಾಗೂ ಅವರ ತಂಡ ಮನವಿ ಮಾಡಿದ್ದಾರೆ.
ಇದೇ ವೇಳೆ ಬೆಳಗಾವಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಹಾಗೂ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ತಿಂಗಳೊಂದರಲ್ಲೇ ಸುಮಾರು ಮೂವರು ರೈಲಿಗೆ ಸಿಲುಕಿದ ಘಟನೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ.
ರೈಲ್ವೆ ಹಳಿ ಬಳಿ ಸಂಚರಿಸುವಾಗ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಕಿವಿಗೆ ಏರ್ಫೋನ್ ಹಾಕಿಕೊಂಡು ರೈಲ್ವೆ ಟ್ರ್ಯಾಕ್ ದಾಟುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ರಿಸ್ಕ್ಯೂ ತಂಡ ಸಾರ್ವಜನಿಕರಿಗೆ ಮನವಿ ಮಾಡಿದೆ.
