
ಶಾಲಾ ಬಸ್ ಕಂದಕಕ್ಕೆ ಉರುಳಿ ವಿದ್ಯಾರ್ಥಿಗೆ ಗಂಭೀರ ಗಾಯ
ಉಡುಪಿ,ಜು.10: ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ನಡೆದಿದೆ.
ಸದ್ಯ ಗಾಯಗೊಂಡ ಮಗುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ.
ಈ ಸಂಬಂಧ ಮಣಿಪಾಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
