BlogLatestTop Storiesಕ್ರೀಡೆ-Sports

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್

ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಪುರುಷರ ಸಿಂಗಲ್ಸ್ ಎಸ್‌ಎಲ್ 4 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ.

ಕನ್ನಡಿಗ ಸುಹಾಸ್‌ಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಸತತ ಎರಡನೇ ಪದಕವಾಗಿದೆ. ಈ ಹಿಂದೆ 2020ರ ಪ್ಯಾರಾಲಿಂಪಿಕ್ಸ್‌ನಲ್ಲೂ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಿಸ್​ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಫ್ರಾನ್ಸ್​ನ ಲ್ಯೂಕಾಸ್ ಮಜೂರ್ ವಿರುದ್ಧ 0-2 (9-21, 13-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.

Share with Friends
author avatar
News Desk