EntertainmentLatestಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ದರ್ಶನ್‌ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ನಟಿ ಕಮ್ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ. ದರ್ಶನ್ (Darshan) ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ದರ್ಶನ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ನಾನು ಬದುಕಿರುವವರೆಗೂ ದರ್ಶನ್‌ ನನ್ನ ಹಿರಿಯ ಮಗ. ಎಲ್ಲರಿಗೂ ಸಹಾಯ ಮಾಡುವ ಮನೋಭಾವವು ದರ್ಶನ್‌ಗಿದೆ. ರೇಣುಕಾಸ್ವಾಮಿ ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಟಿ ಸುಮಲತಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Share with Friends
author avatar
News Desk