BlogLatestTop Storiesರಾಷ್ಟ್ರೀಯ-National

ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆಗಳ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ನ್ಯಾಯಾಂಗ ಪ್ರಕ್ರಿಯೆ ಸಂದರ್ಭದಲ್ಲಿ ನೀಡಿರುವ ಕೆಲವು ವಿವಾದಾತ್ಮಕ ಹೇಳಿಕೆಗಳ ಕುರಿತು ವರದಿ ನೀಡುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿದೆ.

ಕರಣಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ನೀಡಿದ್ದಾರೆ ಎನ್ನಲಾದ ಕಾಮೆಂಟ್ ಗಳ ಬಗ್ಗೆ ಸಾಮಾಜಿಕ ಮಾಧ್ಯಮ ತುಣುಕುಗಳ ಬಗ್ಗೆ ಬೆಳಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಸಂಜೀವ್‌ಕುಮಾರ್‌, ವಿ.ಆರ್‌.ಗವಾಯ್‌, ಸೂರ್ಯಕಾಂತ್‌ ಮತ್ತು ಋಷಿಕೇಶರಾಯ್‌ ಅವರನ್ನೊಳಗೊಂಡ ಪಂಚಪೀಠವು ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರ ಹೇಳಿಕೆ ಕುರಿತು ವರದಿ ನೀಡಬೇಕೆಂದು ರಿಜಿಸ್ಟ್ರರ್‌ ಜನರಲ್‌ಗೆ ಸೂಚನೆ ಕೊಟ್ಟಿದೆ.

ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ವೇಳೆ ಎರಡು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದ್ದವು. ನ್ಯಾಯಮೂರ್ತಿ ಶ್ರೀಶಾನಂದ ಅವರು ವಿಚಾರಣೆ ಸಂದರ್ಭದಲ್ಲಿ ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಉಲ್ಲೇಖಿಸಿದ್ದು, ಇನ್ನೊಂದು ವಿಡಿಯೋದಲ್ಲಿ ಮಹಿಳಾ ವಕೀಲರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ವೈರಲ್ಲಾಗಿತ್ತು. ಇದರ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಸುಪ್ರೀಂಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

Share with Friends
author avatar
News Desk