ಕೇಜ್ರಿವಾಲ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಮಧ್ಯಂತರ ಜಾಮೀನು (Bail) ಅವಧಿ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ತಿರಸ್ಕರಿಸಿದೆ. ಹಿಂದೆ ನೀಡಿದ ಆದೇಶದಂತೆ ಜೂನ್ 2ರಂದು ಅವರು ಜೈಲಿಗೆ (jail) ಹೋಗಬೇಕಾಗುತ್ತದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅವರು ಜೈಲು ಸೇರಿದ್ದರು. ಕೆಲವೇ ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದರು. ಬಳಿಕ ಅವರಿಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ. ಇದನ್ನೂ ಓದಿ: ಹಿಂದೂ ಯುವಕನ ಹಲ್ಲೆ ಪ್ರಕರಣ- ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್ಐ ಅಮಾನತು
ಸದ್ಯ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ಅವರು ಮತ್ತೆ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ. ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಹೇಳಿದ್ದೇನು? ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ. ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು. ಇದನ್ನೂ ಓದಿ: ಹಾಸನದ ಸಂಸದರ ನಿವಾಸದಲ್ಲಿ ಪರಿಶೀಲನೆ – ಪ್ರಜ್ವಲ್ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್ಐಟಿ
ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಪ್ರಾರಂಭವಾದ ತಕ್ಷಣ, ಅಭಿಷೇಕ್ ಮನು ಸಿಂಘ್ವಿ ನಮಗೆ ಇನ್ನೂ ಏಳು ದಿನಗಳ ಮಧ್ಯಂತರ ಜಾಮೀನು ವಿಸ್ತರಿಸಬೇಕೆಂದು ಹೇಳಿದರು. ವೈದ್ಯಕೀಯ ಪರೀಕ್ಷೆಗಳನ್ನು ಮಾಡಬೇಕಾಗಿದೆ. ಇದು ನ್ಯಾಯಾಲಯ ನೀಡಿರುವ ಸ್ವಾತಂತ್ರ್ಯದ ದುರ್ಬಳಕೆಯಲ್ಲ ಎಂದರು. ಇದನ್ನೂ ಓದಿ: ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ
