Crime NewsLatestಬೆಂಗಳೂರು-Bengaluruರಾಜ್ಯ-Karnataka

ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ (Suraj Revanna) ಸಲ್ಲಿಸಿದ್ದ ಜಮೀನು (Bail) ಅರ್ಜಿ ವಜಾಗೊಂಡಿದೆ.

ಹೊಳೆನರಸೀಪುರದಲ್ಲಿ (Holenarasipura) ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು 42 ಎಸಿಎಂಎಂ ಕೋರ್ಟ್‌ನಲ್ಲಿ ನಡೆಯಿತು. ಇದನ್ನೂ ಓದಿ: ದಾಸನಿಗೆ ಜೈಲು ಉಟದಿಂದ ಫುಡ್ ಪಾಯಿಸನ್ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

https://youtu.be/zgiyhkjn7M8?si=aStxjMt-8kZDVVSu

27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್‌ ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್‌ಐಆರ್

https://youtu.be/Z9guiREBeLU?si=d4BUA1VbAGpzo_2g
Share with Friends
author avatar
News Desk