Crime NewsLatestಕೊಪ್ಪಳ-Koppalaರಾಜ್ಯ-Karnataka

ಕೊಪ್ಪಳದಲ್ಲಿ ಒಂದೇ ಕುಟುಂಬದ 3 ಜನ ಅನುಮಾನಾಸ್ಪದ ಸಾವು

ಕೊಪ್ಪಳ: ಒಂದೇ ಕುಟುಂಬದ (Family) ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿರುವ ಘಟನೆ ಕೊಪ್ಪಳ (Koppal) ತಾಲೂಕಿನ ಹೊಸಲಿಂಗಾಪುರದಲ್ಲಿ ನಡೆದಿದೆ.

ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳು. ವಸಂತಾ ಮನೆ ಒಡತಿ. ಅಂಧ್ರರ ಮೂಲದ ನಂದ್ಯಾಲ ಗ್ರಾಮದ ವ್ಯಕ್ತಿ ಜೊತೆ ವಸಂತಾ ಅವರ ಮದುವೆ ಆಗಿತ್ತು. ಆದರೆ ದಂಪತಿಗಳು ನಡುವೆ ಸರಿ ಇರದ ಕಾರಣ ಕಳೆದ ಎರಡು ವರ್ಷದ ಹಿಂದೆ ವಸಂತಾ ಅವರು ಪತಿಯಿಂದ ದೂರವಾಗಿ, ಹೊಸ‌‌ಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ತಾಯಿ ಮತ್ತು ಮಗನ ಜೊತೆ ಇದ್ದರು. ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆ ಏರಿಕೆ – ಕೃಷಿ ಸಚಿವರ ವಿರುದ್ಧ ಜೆಡಿಎಸ್ ಆಕ್ರೋಶ

https://youtu.be/CX3cL2Qp39Q?si=VjO85nWWB0uCiZHS

ಹೊಸ‌‌ಲಿಂಗಾಪುರ ಬಳಿ ಇರುವ ಬೊಂಬೆ ಪ್ಯಾಕ್ಟರಿಯಲ್ಲಿ ವಸಂತಾ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದರು. ನಂತರ ಆರು ತಿಂಗಳ ಹಿಂದೆ ಕುಟುಂಬಸ್ಥರಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು. ಇದನ್ನೂ ಓದಿ: ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್ ಕ್ಯಾನ್ಸಲ್ ಆಗಲಿದೆ – ಪರಮೇಶ್ವರ್

ಸೋಮವಾರ (ಮೇ 27) ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬ ಮಗಳು ಕರೆ ಮಾಡಿದ್ದರು. ಆದರೆ ರಾಜೇಶ್ವರಿ ಕರೆ ಸ್ವೀಕರಿಸಲಿಲ್ಲ. ಹೀಗಾಗಿ ಇಂದು (ಮೇ 28) ಮುಂಜಾನೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾಜೇಶ್ವರಿ ಮತ್ತು ಸಾಯಿಧರ್ಮತೇಜ್ ಶವ ಬೆಡ್​ರೂಮ್​ನಲ್ಲಿ ಮತ್ತು ವಸಂತಾ ಶವ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ.ಇದನ್ನೂ ಓದಿ: ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆ

https://youtu.be/dsSAhEc_2kQ?si=UVIgnY7k4cemwBT8

ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

Share with Friends
author avatar
News Desk